ಭದ್ರಾವತಿ ನಗರಸಭೆ ವ್ಯಾಪ್ತಿಯ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಸಂಸದರ ನಿಧಿಯಿಂದ ಸುಮಾರು ೨೫ ಲಕ್ಷ ರು. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಭದ್ರಾವತಿ, ಜು. ೮: ನಗರಸಭೆ ವ್ಯಾಪ್ತಿಯ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಸಂಸದರ ನಿಧಿಯಿಂದ ಸುಮಾರು ೨೫ ಲಕ್ಷ ರು. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಶ್ರೀ ಚೌಡೇಶ್ವರಿ ದೇವಸ್ಥಾನ ಸುರಗಿತೋಪಿನ ಗ್ರಾಮ ದೇವತೆಯಾಗಿದ್ದು, ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ಅಸ್ತಿತ್ವಕ್ಕೆ ಬಂದ ನಂತರ ದೇವಸ್ಥಾನ ಜೀರ್ಣೋದ್ದಾರ ಕಾರ್ಯ ಹಂತ ಹಂತವಾಗಿ ನಡೆಯುತ್ತಿದೆ. ಇದೀಗ ಸಂಸದರ ನಿಧಿಯಿಂದ ಸುಮಾರು ೨೫ ಲಕ್ಷ ರು. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಗೊಳ್ಳುತ್ತಿದೆ.
ನಗರಸಭಾ ಸದಸ್ಯೆ ಜಯಶೀಲ, ಟ್ರಸ್ಟ್ ಗೌರವಾಧ್ಯಕ್ಷ ಜನಾರ್ಧನ್, ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ಪರಮೇಶ್, ಖಜಾಂಚಿ ರವಿ ಹಾಗು ಪದಾಧಿಕಾರಿಗಳು, ದೇವಸ್ಥಾನ ಪ್ರಧಾನ ಅರ್ಚಕ ಮುರಳಿಧರ, ನಿವಾಸಿಗಳಾದ ಸುರೇಶ್, ಚಿಕ್ಕರಾಜು, ಕರಿಯಪ್ಪ, ನಿತ್ಯಾನಂದನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment