ಭದ್ರಾವತಿಯಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ಖಂಡಿಸಿ ಜಾತ್ಯಾತೀತ ಜನತಾದಳ ವತಿಯಿಂದ ಶಾರದ ಅಪ್ಪಾಜಿ ನೇತೃತ್ವದಲ್ಲಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಜು. ೫: ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನೀತಿ ಖಂಡಿಸಿ ಜಾತ್ಯಾತೀತ ಜನತಾದಳ ವತಿಯಿಂದ ಶಾರದ ಅಪ್ಪಾಜಿ ನೇತೃತ್ವದಲ್ಲಿ ತಾಲೂಕು ಕಛೇರಿ ಮಿನಿ ವಿಧಾನಸೌಧದ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಮುಖರು, ಕೊರೋನಾ ಪರಿಣಾಮ ಜನರ ಬದುಕು ಅತಂತ್ರವಾಗಿದೆ. ಈ ನಡುವೆ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಹಾಗು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬದುಕು ಮತ್ತಷ್ಟು ಸಂಕಷ್ಟದಿಂದ ಸಾಗಿಸುವಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿವೆ ಎಂದು ಆರೋಪಿಸಲಾಯಿತು.
ತಕ್ಷಣ ಬೆಲೆ ಏರಿಕೆಗೆ ಕಡಿವಾಣ ಹಾಕುವ ಮೂಲಕ ಜನ ಸಾಮಾನ್ಯರು ನೆಮ್ಮದಿಯಾಗಿ ಬದುಕು ಸಾಗಿಸಲು ಅವಕಾಶ ಕಲ್ಪಿಸಿಕೊಡುವಂತೆ ಆಗ್ರಹಿಸುವ ಜೊತೆಗೆ ಪ್ರಧಾನ ಮಂತ್ರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಪಕ್ಷದ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಸ್. ಮಣಿಶೇಖರ್, ಜೆ.ಪಿ ಯೋಗೇಶ್, ಮಾಜಿ ಸದಸ್ಯ ಎಸ್. ಕುಮಾರ್, ನಗರಸಭಾ ಸದಸ್ಯರಾದ ಬಸವರಾಜ ಆನೆಕೊಪ್ಪ, ಜಯಶೀಲ, ವಿಜಯ, ಸವಿತ, ಮುಖಂಡರಾದ ಡಿ.ಟಿ ಶ್ರೀಧರ್, ಅಶೋಕ್‌ಕುಮಾರ್, ನಂಜುಂಡೇಗೌಡ, ಗೊಂದಿ ಜಯರಾಂ, ಡಾರ್ವಿನ್, ಬದರಿನಾರಾಯಣ, ಗುಣಶೇಖರ್, ಶಿವರಾಜ್, ವೆಂಕಟೇಶ್ ಉಜ್ಜನಿಪುರ, ಉಮೇಶ್ ಸೇರಿದಂತೆ, ಪಕ್ಷದ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment