ಜಿ. ಸಂತೋಷ್‌ಕುಮಾರ್
ಭದ್ರಾವತಿ, ಜು. ೧೬: ಅಧಿಕಾರ ಸ್ವೀಕರಿಸಿ ೧೦ ತಿಂಗಳು ಪೂರೈಸುವ ಮೊದಲೇ ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್ ಅವರನ್ನು ಶುಕ್ರವಾರ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ.
ತಹಸೀಲ್ದಾರ್ ಗ್ರೇಡ್-೧ ಅಧಿಕಾರಿಯಾಗಿರುವ ಸಂತೋಷ್‌ಕುಮಾರ್ ಅವರು ಕಳೆದ ವರ್ಷ ನವಂಬರ್‌ನಲ್ಲಿ ಅಧಿಕಾರ ಸ್ವೀಕರಿಸಿದ್ದರು. ಕೋವಿಡ್-೧೯ರ ನಡುವೆಯೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಏಕಾಏಕಿ ಅವರನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರ ಹುದ್ದೆಗೆ ವರ್ಗಾವಣೆಗೊಳಿಸಲಾಗಿದೆ.
ಜಿ. ಸಂತೋಷ್‌ಕುಮಾರ್ ಅವರಿಂದ ತೆರವಾದ ಹುದ್ದೆಗೆ ಜಿಲ್ಲಾ ನಗರಾಭಿವೃದ್ಧಿ ಕೋಶ ಪುರಸಭಾ ತಹಸೀಲ್ದಾರ್ ಆರ್. ಪ್ರದೀಪ್ ಅವರನ್ನು ನೇಮಕಗೊಳಿಸಲಾಗಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಂ.ಎಸ್ ರಶ್ಮಿ ಆದೇಶ ಹೊರಡಿಸಿದ್ದಾರೆ.
No comments:
Post a Comment