ಭದ್ರಾವತಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಮಡಿಕೇರಿಯಲ್ಲಿ ಯೋಧ ಹಾಗು ಯೋಧನ ಕುಟುಂಬದವರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಶನಿವಾರ ಸಂಜೆ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ಜು. ೩೧: ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಮಡಿಕೇರಿಯಲ್ಲಿ ಯೋಧ ಹಾಗು ಯೋಧನ ಕುಟುಂಬದವರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಶನಿವಾರ ಸಂಜೆ ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.
ಮಡಿಕೇರಿಯಲ್ಲಿ ಯೋಧ ಅಶೋಕ್‌ಕುಮಾರ್ ಹಾಗು ಅವರ ಕುಟುಂಬ ಸದಸ್ಯರ ಮೇಲೆ ನಡೆದಿರುವ ಹಲ್ಲೆಯನ್ನು ಮಾಜಿ ಸೈನಿಕರು ತೀವ್ರವಾಗಿ ಖಂಡಿಸಿದರು. ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಸಂಘದ ಉಪಾಧ್ಯಕ್ಷ ಬಿ.ಆರ್ ದಿನೇಶ್‌ಕುಮಾರ್, ಪ್ರಧಾನ ಕಾರ್ಯದರ್ಶಿ ವೆಂಕಟಗಿರಿ, ಮಾಜಿ ಸೈನಿಕರ ಪತ್ನಿಯರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷೆ ಶಶಿಕಲಾ, ಕಾರ್ಯದರ್ಶಿ ಕಲಾ, ಸುಪ್ರಿಯಾ ಹಾಗು ಮಾಜಿ ಸೈನಿಕರು ಮತ್ತು ಕುಟುಂಬ ವರ್ಗದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
No comments:
Post a Comment