ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ಭದ್ರಾವತಿ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವಿಶೇಷ ಪೂಜೆ, ಅಲಂಕಾರ ಕೈಗೊಳ್ಳಲಾಗಿತ್ತು.
ಭದ್ರಾವತಿ, ಜು. ೯: ಮಣ್ಣೆತ್ತಿನ ಅಮಾವಾಸ್ಯೆ ಅಂಗವಾಗಿ ನಗರದ ಬಿ.ಎಚ್ ರಸ್ತೆ, ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವಿಶೇಷ ಪೂಜೆ, ಅಲಂಕಾರ ಕೈಗೊಳ್ಳಲಾಗಿತ್ತು.
ಬೆಳಿಗ್ಗೆಯಿಂದಲೇ ನೂರಾರು ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸಿ ಅಮ್ಮನವರ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ಅಮ್ಮನವರಿಗೆ ವಿಶೇಷ ಅಲಂಕಾರ ಕೈಗೊಳ್ಳುವ ಮೂಲಕ ವಿಶೇಷ ಪೂಜೆ, ಮಹಾಮಂಗಳಾರತಿ ಜರುಗಿತು. ಭಕ್ತಾಧಿಗಳಿಗೆ ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಉದ್ಯಮಿ ಎ. ಮಾಧು, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಈ ದೇವಸ್ಥಾನದಲ್ಲಿ ಪ್ರತಿ ವರ್ಷ ಮಣ್ಣೆತ್ತಿನ ಅಮಾವಾಸ್ಯೆಯನ್ನು ವಿಶೇಷವಾಗಿ ಆಚರಿಸಿಕೊಂಡು ಬರಲಾಗುತ್ತಿದ್ದು, ಸಾವಿರಾರು ಭಕ್ತಾಧಿಗಳು ಪಾಲ್ಗೊಳ್ಳುತ್ತಿದ್ದಾರೆ. ಆದರೆ ಈ ಬಾರಿ ಕೊರೋನಾ ಹಿನ್ನಲೆಯಲ್ಲಿ ಭಕ್ತಾಧಿಗಳ ಸಂಖ್ಯೆ ಕಡಿಮೆಯಾಗಿರುವುದು ಕಂಡು ಬಂದಿತು.
No comments:
Post a Comment