ಭದ್ರಾವತಿ: ತಾಲೂಕಿನ ಮಲ್ಲಿಗೇನಹಳ್ಳಿ ಕ್ಯಾಂಪ್ ನಿವಾಸಿ, ಅರಣ್ಯ ಇಲಾಖೆ ಗುತ್ತಿಗೆದಾರರೊಬ್ಬರು ಕಾರು ಅಪಘಾತದಲ್ಲಿ ಮೃತಪಟ್ಟಿರುವುದು.
ಭದ್ರಾವತಿ, ಜು. ೧೦: ತಾಲೂಕಿನ ಮಲ್ಲಿಗೇನಹಳ್ಳಿ ಕ್ಯಾಂಪ್ ನಿವಾಸಿ, ಅರಣ್ಯ ಇಲಾಖೆ ಗುತ್ತಿಗೆದಾರರೊಬ್ಬರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಲಿಂಗರಾಜ್(೩೨) ಮೃತಪಟ್ಟಿದ್ದು, ಲಿಂಗರಾಜ್ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ. ಲಿಂಗರಾಜ್ ಪತ್ನಿ, ೨ ಗಂಡು ಮಕ್ಕಳನ್ನು ಹೊಂದಿದ್ದರು. ಮೃತ ದೇಹದ ಶವ ಪರೀಕ್ಷೆ ಹಳೇನಗರ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಯಿತು. ಲಿಂಗರಾಜ್ ನಿಧನಕ್ಕೆ ಮಲ್ಲಿಗೇನಹಳ್ಳಿ ಗ್ರಾಮ ಹಾಗು ಮಲ್ಲಿಗೇನಹಳ್ಳಿ ಕ್ಯಾಂಪ್ ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.
No comments:
Post a Comment