ಭದ್ರಾವತಿ, ಜು. ೩: ತಾಲೂಕಿನಲ್ಲಿ ಇದೆ ಮೊದಲ ಬಾರಿಗೆ ಸೋಂಕಿನ ಪ್ರಮಾಣ ಒಂದಂಕಿಗೆ ಇಳಿದಿದ್ದು, ಶನಿವಾರ ಕೇವಲ ೭ ಸೋಂಕು ಪತ್ತೆಯಾಗಿದೆ.
ಒಟ್ಟು ೭೮೦ ಮಂದಿ ಮಾದರಿ ಸಂಗ್ರಹಿಸಲಾಗಿದ್ದು, ೧೭ ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೂ ಒಟ್ಟು ೭೨೧೩ ಸೋಂಕು ಪ್ರಕರಣಗಳು ದಾಖಲಾಗಿದ್ದು, ೭೧೧೩ ಮಂದಿ ಗುಣಮುಖರಾಗಿದ್ದಾರೆ. ೧೦೦ ಸಕ್ರಿಯ ಪ್ರಕರಣಗಳು ಬಾಕಿ ಉಳಿದಿವೆ. ೭೭ ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರ ವ್ಯಾಪ್ತಿಯಲ್ಲಿ ೫ ಕಂಟೈನ್‌ಮೆಂಟ್ ಜೋನ್‌ಗಳು ಸಕ್ರಿಯವಾಗಿದ್ದು, ಇದುವರೆಗೂ ಒಟ್ಟು ೧೬೩ ಜೋನ್‌ಗಳನ್ನು ತೆರವುಗೊಳಿಸಲಾಗಿದೆ. ಗ್ರಾಮಾಂತರ ವ್ಯಾಪ್ತಿಯಲ್ಲಿ ೧೧ ಜೋನ್‌ಗಳು ಸಕ್ರಿಯಾಗಿದ್ದು, ಇದುವರೆಗೂ ೩೮ ಜೋನ್‌ಗಳನ್ನು ತೆರವುಗೊಳಿಸಲಾಗಿದೆ.
No comments:
Post a Comment