ಭದ್ರಾವತಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಣಿಪಾಲ್ ಆರೋಗ್ಯ ಕಾರ್ಡ್ ಬಿಡುಗಡೆಗೊಳಿಸಲಾಯಿತು.
ಭದ್ರಾವತಿ, ಜು. ೩೦: 'ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ' ಎಂಬ ದ್ಯೇಯ ವಾಕ್ಯದೊಂದಿಗೆ ಈ ಬಾರಿ ವಿಶೇಷವಾಗಿ ಮಣಿಪಾಲ್ ಕಾರ್ಡ್ ಯೋಜನೆ ಆರೋಪಿಸಲಾಗಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಉಪ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು.
ಅವರು ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ೨೦ ವರ್ಷಗಳನ್ನು ಯಶಸ್ವಿಯಾಗಿ ಪೂರೈಸಲಾಗಿದೆ. ರಿಯಾಯಿತಿ ದರದಲ್ಲಿ ಆರೋಗ್ಯ ಒದಗಿಸುವ ಮೂಲಕ ಈ ಯೋಜನೆಗೆ ಹೆಚ್ಚು ಸದಸ್ಯರನ್ನು ದಾಖಲಿಸಿಕೊಳ್ಳಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕ ಮತ್ತು ಮಧ್ಯ ಕರ್ನಾಟಕದ ಸುಮಾರು ೧೨ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೋಜನೆ ವಿಸ್ತರಿಸಲಾಗಿದೆ. ಅಲ್ಲದೆ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ಯೋಜನೆ ವಿಸ್ತರಣೆಗೊಂಡಿದೆ ಎಂದರು.
www.manipalhealthcard.com
ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ. ೧ ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವ ಒಬ್ಬರಿಗೆ ರು. ೩೦೦ ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, ೨೫ ವರ್ಷದ ಒಳಗಿನ ಮಕ್ಕಳಿಗೆ ರು. ೬೦೦ ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, ೨೫ ವರ್ಷದ ಒಳಗಿನ ಮಕ್ಕಳು ಮತ್ತು ೪ ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರು. ೭೫೦. ಇದೊಂದು ಹೆಚ್ಚುವರಿ ಲಾಭವಾಗಿದೆ. ೨ ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರು. ೫೦೦, ಕುಟುಂಬಕ್ಕೆ ರು. ೮೦೦ ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರು. ೯೫೦ ಆಗಿರುತ್ತದೆ ಎಂದರು.
ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆ ಯಲ್ಲಿ ಶೇ. ೫೦ರಷ್ಟು, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ. ೩೦ರಷ್ಟು, ಸಿಟಿ, ಎಂಆರ್‌ಐ, ಅಲ್ಟ್ರಾಸೌಂಡ್‌ಗಳಲ್ಲಿ ಶೇ. ೨೦ರಷ್ಟು, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ ೨೦ರಷ್ಟು, ಔಷಧಾಲಯಗಳಲ್ಲಿ ಶೇ. ೧೨ರವರೆಗೆ ರಿಯಾಯಿತಿ ಪಡೆಯಬಹುದಾಗಿದೆ ಎಂದರು.
ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ. ೨೫ರಷ್ಟು, ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್‌ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇ. ೧೦ರಷ್ಟು ರಿಯಾಯಿತಿ ಪಡೆಯಬಹುದಾಗಿದ್ದು, ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಸದುಪಯೋಗಪಡೆದುಕೊಳ್ಳಬಹುದಾಗಿದೆ. ಆರೋಗ್ಯ ಕಾರ್ಡ್‌ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದಾಗಿದೆ ಎಂದರು.
ಮಾರುಕಟ್ಟೆ ವಿಭಾಗದ ಪ್ರತಿನಿಧಿ ಶ್ರೀನಿವಾಸ್ ಭಾಗವತ್, ಪತ್ರಿಕಾ ಭವನ ಕಟ್ಟಡ ಸಮಿತಿ ಅಧ್ಯಕ್ಷ ಕಣ್ಣಪ್ಪ, ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment