ಖಾಸಗಿ ಶಾಲೆಗಳಲ್ಲಿ ಸರ್ಕಾರಿ ಆದೇಶ ಉಲ್ಲಂಘಿಸಿ ಹೆಚ್ಚಿನ ಶುಲ್ಕ ವಸೂಲಾತಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಬುಧವಾರ ಭದ್ರಾವತಿ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಜು. ೨೮: ಖಾಸಗಿ ಶಾಲೆಗಳಲ್ಲಿ ಸರ್ಕಾರಿ ಆದೇಶ ಉಲ್ಲಂಘಿಸಿ ಹೆಚ್ಚಿನ ಶುಲ್ಕ ವಸೂಲಾತಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಬುಧವಾರ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಸರ್ಕಾರಿ ಶಾಲೆಗಳನ್ನು ಸಮರ್ಪಕವಾಗಿ ಅಭಿವೃದ್ಧಿಪಡಿಸದ ಕಾರಣ ಮೂಲ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಇದರಿಂದಾಗಿ ಮಧ್ಯಮ ಹಾಗು ಬಡ ಕುಟುಂಬಗಳು ಸಹ ಕೋವಿಡ್-೧೯ರ ಸಂಕಷ್ಟದ ಸಂದರ್ಭದಲ್ಲೂ ಖಾಸಗಿ ಶಾಲೆಗಳನ್ನು ಅವಲಂಬಿಸುವಂತಾಗಿದೆ. ಪ್ರಸ್ತುತ ಎಲ್ಲೆಡೆ ಆರ್ಥಿಕ ಸಂಕಷ್ಟ ಎದುರಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಸಮಸ್ಯೆ ಎದುರಾಗಬಾರದೆಂಬ ಉದ್ದೇಶದಿಂದ ಹಾಗು ಶಾಲೆಗಳನ್ನು ಸುಗಮವಾಗಿ ಮುನ್ನಡೆಸಿಕೊಂಡು ಹೋಗಲು ಅನುಕೂಲವಾಗುವಂತೆ ಸರ್ಕಾರ ಶೇ.೩೦ರಷ್ಟು ಶುಲ್ಕ ಕಡಿಮೆಗೊಳಿಸಿ ವಸೂಲಾತಿ ಮಾಡುವಂತೆ ಆದೇಶಿಸಿದೆ. ಆದರೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಶುಲ್ಕ ವಸೂಲಾತಿ ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ತಕ್ಷಣ ಅನುದಾನ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮುಖ್ಯಸ್ಥರ ಸಭೆ ಕರೆದು ಸರ್ಕಾರದ ಆದೇಶದಂತೆ ನಡೆದುಕೊಳ್ಳುವಂತೆ ಸೂಚಿಸಬೇಕೆಂದು ಮನವಿ ಮಾಡಲಾಯಿತು.
ಪಕ್ಷದ ಪ್ರಮುಖರಾದ ಅಬ್ದುಲ್ ಖದೀರ್, ಎನ್.ಪಿ ಜೋಸೆಫ್, ಇಬ್ರಾಹಿಂ ಖಾನ್, ಬಿ.ಕೆ ರಮೇಶ್, ಎಚ್. ರವಿಕುಮಾರ್, ಜಾವೇದ್, ನಾಸಿಬಬೇಗಂ, ಬಸವಕುಮಾರ್, ಪರಮೆಶ್ ನಾಯ್ಕ ಮತ್ತು ರೇಷ್ಮೆ ಬಾನು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment