ಬಿ.ವಿ ಗಿರೀಶ್
ಭದ್ರಾವತಿ, ಆ. ೧: ಸಾಮಾಜಿಕ ಹೋರಾಟಗಾರ, ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸ್ಮರಣಾರ್ಥ ಸವಿ ನೆನಪಿನ ಕಾರ್ಯಕ್ರಮ ಆ.೨ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಪದ್ಮನಿಲಯ ಹೋಟೆಲ್ ಸುನಂದ ಹಾಲ್‌ನಲ್ಲಿ ಬಿ.ವಿ ಗಿರೀಶ್ ಅಭಿಮಾನಿಗಳ ಬಳಗದಿಂದ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತಾ ವಹಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ಬಿ.ವಿ ಗಿರೀಶ್ ಅವರ ಭಾಗಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಿದ್ದಾರೆ.
ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ, ತಹಸೀಲ್ದಾರ್ ಆರ್. ಪ್ರದೀಪ್, ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ಉಪ ತಹಸೀಲ್ದಾರ್ ಮಂಜಾನಾಯ್ಕ, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ಸಂಚಾರಿ ಪೋಲಿಸ್ ಠಾಣಾಧಿಕಾರಿ ಕವಿತ, ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ಭಾರತಿ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಬಿ.ವಿ ಗಿರೀಶ್ ಕುಟುಂಬಸ್ಥರಾದ ತಂದೆ ವೆಂಕಟೇಶ್, ತಾಯಿ ಲಕ್ಷ್ಮಮ್ಮ, ದೇವಿಕಾ ಗಿರೀಶ್, ಅಂಕಿತ ಮತ್ತು ಧನುಷ್ ಉಪಸ್ಥಿತರಿರುವವರು.
No comments:
Post a Comment