ಕರ್ನಾಟಕ ರಾಜ್ಯ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಧರ್ಮಶಾಸ್ತ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಸುಮಾರು ೨೦೦ ಮಂದಿಗೆ ಕೋವಿಡ್-೧೯ ಲಸಿಕೆ ಹಾಕಿಸಲಾಯಿತು. ಕಾರ್ಯಕ್ರಮವನ್ನು ನಗರಸಭಾ ಸದಸ್ಯ ಜಾರ್ಜ್ ಮತ್ತು ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
ಭದ್ರಾವತಿ, ಆ. ೧೦: ಕರ್ನಾಟಕ ರಾಜ್ಯ ಕನ್‌ಸ್ಟ್ರಕ್ಷನ್ ವರ್ಕರ್ಸ್ ಸೆಂಟ್ರಲ್ ಯೂನಿಯನ್ ವತಿಯಿಂದ ನಗರದ ತರೀಕೆರೆ ರಸ್ತೆಯಲ್ಲಿರುವ ಧರ್ಮಶಾಸ್ತ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಸುಮಾರು ೨೦೦ ಮಂದಿಗೆ ಕೋವಿಡ್-೧೯ ಲಸಿಕೆ ಹಾಕಿಸಲಾಯಿತು.
ನಗರಸಭಾ ಸದಸ್ಯ ಜಾರ್ಜ್, ಕಟ್ಟಡ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮ ಕಾರ್ಯಾಧ್ಯಕ್ಷ ಅಭಿಲಾಷ್, ತಾಂತ್ರಿಕ ಸಲಹೆಗಾರ ಮನೋಹರ್, ಗೌರವಾಧ್ಯಕ್ಷ ಜಿ. ಸುರೇಶ್, ಸಲಹೆಗಾರ ಶಿವಣ್ಣಗೌಡ, ನಿರ್ದೇಶಕ ಅಂತೋಣಿ ಕ್ರೂಸ್, ಕಾರ್ಯದರ್ಶಿ ನಾರಾಯಣಸ್ವಾಮಿ, ಸಹ ಕಾರ್ಯದರ್ಶಿ ಮಂಜುನಾಥ್, ವಿಭಾಗೀಯ ಅಧ್ಯಕ್ಷ ಶ್ರೀನಿವಾಸ್, ಸಂಚಾಲಕ ಮಂಜುನಾಥ್, ಶ್ರೀ ಧರ್ಮಶಾಸ್ತ್ರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಆರ್. ಮುನಿರಾಜು ಹಾಗು ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment