ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಪ್ರತಿಭಟನೆ ನಡೆಸಿ ಮನವಿ
ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿರುವ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಬುಧವಾರ ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಅಬಕಾರಿ ಇನ್ಸ್‌ಪೆಕ್ಟರ್ ಸುನಿಲ್ ಕಲ್ಲಾಪುರ್ ಅವರಿಗೆ ಮನವಿ ಸಲ್ಲಿಸಿದರು.
ಭದ್ರಾವತಿ, ಆ. ೧೮: ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿರುವ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಬುಧವಾರ ಹೊಸ ಸೇತುವೆ ರಸ್ತೆಯಲ್ಲಿರುವ ಅಬಕಾರಿ ಇಲಾಖೆ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಅಬಕಾರಿ ಇನ್ಸ್‌ಪೆಕ್ಟರ್ ಸುನಿಲ್ ಕಲ್ಲಾಪುರ್ ಅವರಿಗೆ ಮನವಿ ಸಲ್ಲಿಸಿದರು.
ಸರ್ವೋಚ್ಛ ನ್ಯಾಯಾಲಯ ೨೦೧೬ರಲ್ಲಿ ಹೆದ್ದಾರಿ ಪಕ್ಕದ ೫೦೦ ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿದ್ದು, ಇದೀಗ ಪುನಃ ಇದೆ ಆದೇಶವನ್ನು ಹೊರಡಿಸಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ವಿಷಾದನೀಯ ಬೆಳವಣಿಗೆಯಾಗಿದೆ.
ಹೆದ್ದಾರಿ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ೨೦೧೯ ರಿಂದ ಇಲ್ಲಿಯವರೆಗೂ ಸುಮಾರು ೪.೫ ಲಕ್ಷ ಅಪಘಾತಗಳು ನಡೆದಿದ್ದು, ಈ ಪೈಕಿ ೧.೫ ಲಕ್ಷ ಜನರು ಮೃತಪಟ್ಟಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿ ಸುಮಾರು ೧ ಲಕ್ಷ ಜನರು ಮೃತಪಟ್ಟಿದ್ದಾರೆ. ಸುಮಾರು ೨ ಲಕ್ಷ ಜನರು ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಈ ವಿಚಾರವನ್ನು ಅಬಕಾರಿ ಇಲಾಖೆ ಗಂಭೀರವಾಗಿ ಪರಿಗಣಿಸಿ ತಕ್ಷಣ ತಾಲೂಕಿನಾದ್ಯಂತ ಹೆದ್ದಾರಿ ಪಕ್ಕದಲ್ಲಿ ೫೦೦ ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಸೆ.೧ರಿಂದ ನ್ಯಾಯ ಸಿಗುವವರೆಗೂ ಏಕಾಂಗಿಯಾಗಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದರು.
ಮದ್ಯದ ಅಂಗಡಿಯಲ್ಲಿ ಕೇವಲ ಪಾರ್ಸೆಲ್ ಮಾತ್ರ ಕೊಡಲು ಅನುಮತಿ ಇದೆ...ಆದ್ರೆ ಅಲ್ಲೇ ಸಣ್ಣ ಜಾಗದಲ್ಲಿ ಮದ್ಯ ಸೇವನೆ ಮಾಡುತ್ತಾರೆ..
ReplyDeleteಅಥವ ಮಗ್ಗುಲಲ್ಲಿ ಸಣ್ಣ ಹೋಟೆಲ್ನಲ್ಲಿ ಮದ್ಯ ಪಾನ ಮಾಡಿದರು ಯಾವ ಇಲಾಖೆಯವರು ಅಡಚಣೆ ಮಾಡುವುದಿಲ್ಲ..
ಮುಖ್ಯ ರಸ್ತೆಯಲ್ಲೇ ಬೈಕ್ ಕಾರ್ ನಿಲ್ಲಿಸಿ ಮದ್ಯಪಾನ ಮಾಡಲಾಗುತ್ತಿದೆ...ರಸ್ತೆ ಬದಿಯಲ್ಲೇ ಬಾಟಲ್ ನೀರು ಎಸುದು ಹೋಗಿರುವುದು ಕಾಣಬಹುದು...