ಭದ್ರಾವತಿ, ಆ. ೨೨: ನಗರದ ನ್ಯೂಟೌನ್ ಸರ್ಕಾರಿ ವಿಐಎಸ್‌ಎಸ್‌ಜೆ ಪಾಲಿಟೆಕ್ನಿಕ್‌ನಲ್ಲಿ ಪ್ರಸಕ್ತ ಸಾಲಿನ ಮೊದಲನೇ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
೩ ವರ್ಷ ಅವಧಿಯ ಸಿವಿಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್ ಮತ್ತು ಮೆಟಲರ್ಜಿಕಲ್ ಇಂಜಿನಿಯರಿಂಗ್ ವೃತ್ತಿ ವಿಷಯಗಳಿಗೆ ತಲಾ ೬೦+೩ ಸ್ಥಾನಗಳು ಮೀಸಲಿವೆ.
ಎಸ್‌ಎಸ್‌ಎಲ್‌ಸಿ/ಸಿಬಿಎಸ್‌ಇ/ಐಸಿಎಸ್‌ಇ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ೩೫ ಅಂಕಗಳೊಂದಿಗೆ ತೇರ್ಗಡೆ ಹೊಂದಿರುವವರು ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಪಡೆಯಲು ಅರ್ಹರಾಗಿದ್ದು, ಐಟಿಐ ಹಾಗು ಪಿಯುಸಿ(ವಿಜ್ಞಾನ) ಪಾಸ್ ಆದ ವಿದ್ಯಾರ್ಥಿಗಳಿಗೆ ನೇರವಾಗಿ ೩ನೇ ಸೆಮಿಸ್ಟರ್ ಪ್ರವೇಶಕ್ಕೆ ಅವಕಾಶವಿದೆ.
ಅರ್ಜಿ ಸಲ್ಲಿಸಲು ಆ. ೨೫ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೯೯೮೬೦೭೨೬೯೭ ಅಥವಾ ೮೨೭೭೪೯೮೪೭೧ ಸಂಖ್ಯೆ ಕರೆ ಮಾಡಬಹುದಾಗಿದೆ.
No comments:
Post a Comment