ರಾಜ್ಯದಲ್ಲಿ ಔರದ್ಕರ್ ವರದಿಯನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭದ್ರಾವತಿ ನಿವಾಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮಂಗಳವಾರ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಭದ್ರಾವತಿ, ಆ. ೨೪: ರಾಜ್ಯದಲ್ಲಿ ಔರದ್ಕರ್ ವರದಿಯನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜನತಾದಳ (ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ ಮಂಗಳವಾರ ಏಕಾಂಗಿಯಾಗಿ ಹೋರಾಟ ನಡೆಸುವ ಮೂಲಕ ಗೃಹ ಸಚಿವ ಅರಗಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಅಕ್ಕಪಕ್ಕದ ರಾಜ್ಯಗಳಲ್ಲಿ ಪೊಲೀಸರಿಗೆ ಹೆಚ್ಚಿನ ವೇತನ, ಭತ್ಯೆ ಜೊತೆಗೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ರಾಜ್ಯದಲ್ಲೂ ಇದೆ ಮಾದರಿಯನ್ನು ಅನುಸರಿಸಬೇಕು. ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಔರದ್ಕರ್ ವರದಿ ನೆನೆಗುದಿಗೆ ಬಿದ್ದಿದ್ದು, ತಕ್ಷಣ ವರದಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸರ್ವೋಚ್ಛ ನ್ಯಾಯಾಲಯ ಸಹ ಕಳವಳ ವ್ಯಕ್ತಪಡಿಸುವ ಜೊತೆಗೆ ೨೦೧೬ರಲ್ಲಿ ನೀಡಿರುವ ಆದೇಶದಂತೆ ಹೆದ್ದಾರಿ ಪಕ್ಕದಲ್ಲಿ ೫೦೦ ಮೀಟರ್ ವ್ಯಾಪ್ತಿಯೊಳಗಿರುವ ಮದ್ಯದಂಗಡಿಗಳನ್ನು ತೆರವುಗೊಳಿಸಬೇಕು. ಬಹುತೇಕ ಮೈಕ್ರೋ ಫೈನಾನ್ಸ್ ಕಂಪನಿಗಳು ಬಡ ಮಹಿಳೆಯರಿಗೆ ಸಾಲ ನೀಡಿದ್ದು, ಕೊರೋನಾ ಸಂದರ್ಭದಲ್ಲೂ ಮರುಪಾವತಿಗೆ ಕಾಲಾವಕಾಶ ನೀಡದೆ ಕಿರುಕುಳ ನೀಡುತ್ತಿವೆ. ಈ ಸಂಬಂಧ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
No comments:
Post a Comment