ಭದ್ರಾವತಿ ವೀರಶೈವ ಸಭಾ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಗರಸಭೆ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಮತ್ತು ಹೊಸಸಿದ್ದಾಪುರದ ಸಹ್ಯಾದ್ರಿ ಪ್ರದೇಶ ಮಟ್ಟದ ಒಕ್ಕೂಟ ಹಾಗು ಫ್ಲಿಫ್‌ಕಾರ್ಟ್ ಮತ್ತು ಅಮೆಜಾನ್ ಸಂಸ್ಥೆಗಳಡಿ ಬೆಂಗಳೂರು ಮತ್ತು ಮೈಸೂರು ವಿಭಾಗ ಮಟ್ಟದ ಮಹಿಳಾ ಸ್ವ-ಸಹಾಯ ಸಂಘಗಳು ಉತ್ಪಾದಿಸುವ ವಸ್ತು ಮತ್ತು ಉಪಕರಣಗಳ ಛಾಯಾಚಿತ್ರ ತೆಗೆಯುವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಛಾಯಾ ಗ್ರಾಹಕರಾಗಿ ಕೆಲ ಕ್ಷಣ ಅಚ್ಚರಿ ಮೂಡಿಸಿದರು.
ಭದ್ರಾವತಿ, ಆ. ೧೨: ದೇಶದಲ್ಲಿ ಮಹಿಳೆಯರು ತಮ್ಮದೇ ಆದ ವಿಶಿಷ್ಟವಾದ ಕೊಡುಗೆಗಳನ್ನು ನೀಡುತ್ತಿದ್ದು, ಮಹಿಳೆಯರು ಸಹ ಆರ್ಥಿಕವಾಗಿ ಮುಂದೆ ಬರಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು.
ಅವರು ಗುರುವಾರ ನಗರದ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಗರಸಭೆ ದೀನದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಮತ್ತು ಹೊಸಸಿದ್ದಾಪುರದ ಸಹ್ಯಾದ್ರಿ ಪ್ರದೇಶ ಮಟ್ಟದ ಒಕ್ಕೂಟ ಹಾಗು ಫ್ಲಿಫ್‌ಕಾರ್ಟ್ ಮತ್ತು ಅಮೆಜಾನ್ ಸಂಸ್ಥೆಗಳಡಿ ಬೆಂಗಳೂರು ಮತ್ತು ಮೈಸೂರು ವಿಭಾಗ ಮಟ್ಟದ ಮಹಿಳಾ ಸ್ವ-ಸಹಾಯ ಸಂಘಗಳು ಉತ್ಪಾದಿಸುವ ವಸ್ತು ಮತ್ತು ಉಪಕರಣಗಳ ಛಾಯಾಚಿತ್ರ ತೆಗೆಯುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳಾ ಒಕ್ಕೂಟ ಮತ್ತು ಸ್ವ-ಸಹಾಯ ಸಂಘಗಳ ಮಹಿಳೆಯರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಸದ್ಬಳಕೆಮಾಡಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕೆಂದರು.
ಮಹಿಳೆಯರು ಆರ್ಥಿಕವಾಗಿ ಬೆಳವಣಿಗೆ ಸಾಧಿಸಿದ್ದಲ್ಲಿ ಕುಟುಂಬ ಸಹ ಬೆಳವಣಿಗೆ ಹೊಂದುತ್ತದೆ. ಅಲ್ಲದೆ ಮಕ್ಕಳ ಉತ್ತಮ ಭವಿಷ್ಯಕ್ಕೆ ಮಹಿಳೆಯರು ಸಹ ಕೈ ಜೋಡಿಸಲು ಸಾಧ್ಯವಾಗುತ್ತದೆ. ಕುಟುಂಬದಲ್ಲಿ ನೆಮ್ಮದಿ ಮತ್ತು ಉತ್ತಮ ವಾತಾವರಣ ಮೂಡುತ್ತದೆ ಎಂದರು.
ಜಿಲ್ಲಾ ಕೌಶಲ್ಯಾಭಿವೃದ್ಧಿ ಸಹ ಸಂಚಾಲಕ ಸುರೇಶ್ ಮತ್ತು ಸಮನ್ವಯ ಕಾಶಿ ಮಾತನಾಡಿ, ಇಲಾಖೆಯಿಂದ ಲಭ್ಯವಾಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಭದ್ರಾವತಿ ತಾಲೂಕಿನಲ್ಲಿ ಮಹಿಳಾ ಒಕ್ಕೂಟ ಮತ್ತು ಸ್ವ-ಸಹಾಯ ಸಂಘಗಳಿಗೆ ಶಾಸಕರು ಹೆಚ್ಚಿನ ಸಹಕಾರ ನೀಡುತ್ತಿದ್ದು, ರಾಜ್ಯದಲ್ಲಿಯೇ ಅತಿಹೆಚ್ಚಿನ ಅನುದಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ದಿನಗಳಲ್ಲೂ ಹೆಚ್ಚಿನ ಸಹಕಾರ ನೀಡುವ ವಿಶ್ವಾಸವಿದೆ ಎಂದರು.
ಪೌರಾಯುಕ್ತ ಕೆ. ಪರಮೇಶ್, ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಹಾಗು ಮಹಿಳಾ ಒಕ್ಕೂಟ ಮತ್ತು ಸ್ವ-ಸಹಾಯ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment