ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ, ಬೆಂಬಲಿಗರಿಂದ ವಿವಿಧ ಹಂತದ ಹೋರಾಟ
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗು ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಗಳ ಉಳಿವಿಗಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ ಬಿ.ಎಸ್ ಗಣೇಶ್ ಹಾಗು ಬೆಂಬಲಿಗರು ದೆಹಲಿಯಲ್ಲಿ ಹೋರಾಟ ಕೈಗೊಂಡಿದ್ದು, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಚಾಲನೆ ನೀಡಿದರು.
ಭದ್ರಾವತಿ, ಆ. ೮ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಹಾಗು ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಗಳ ಉಳಿವಿಗಾಗಿ ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ ಬಿ.ಎಸ್ ಗಣೇಶ್ ಹಾಗು ಬೆಂಬಲಿಗರು ದೆಹಲಿಯಲ್ಲಿ ಹೋರಾಟ ಕೈಗೊಂಡಿದ್ದು, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಚಾಲನೆ ನೀಡಿದ್ದಾರೆ.
ಈಗಾಗಲೇ ಬಿ.ಎಸ್ ಗಣೇಶ್ ನೇತೃತ್ವದಲ್ಲಿ ವಿವಿಧ ಹಂತದಲ್ಲಿ ಹೋರಾಟಗಳು ನಡೆಯುತ್ತಿದ್ದು, ಕಳೆದ ಸುಮಾರು ೬ ವರ್ಷಗಳಿಂದ ಸ್ಥಗಿತಗೊಂಡಿರುವ ಎಂಪಿಎಂ ಕಾರ್ಖಾನೆಯನ್ನು ಪುನಃ ಆರಂಭಿಸುವಂತೆ ಹಾಗು ಹಲವಾರು ವರ್ಷಗಳಿಂದ ರೋಗಗ್ರಸ್ತ ಕಾರ್ಖಾನೆಯಾಗಿರುವ ವಿಐಎಸ್‌ಎಲ್ ಅಭಿವೃದ್ಧಿಗೊಳಿಸಬೇಕೆಂಬ ಪ್ರಮುಖ ಬೇಡಿಕೆಯೊಂದಿಗೆ ಸೇವ್ ವಿಐಎಸ್‌ಎಲ್ ಸೇವ್ ಭದ್ರಾವತಿ ಫಲಕವನ್ನಿಡಿದು ಹೋರಾಟ ನಡೆಸಲಾಗುತ್ತಿದೆ.
ಈ ನಡುವೆ ಮೂಲತಃ ಭದ್ರಾವತಿ ನಗರದವರಾದ ಬಿ.ವಿ ಶ್ರೀನಿವಾಸ್, ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳನ್ನು ನಂಬಿಕೊಂಡು ಸಾವಿರಾರು ಕಾರ್ಮಿಕ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಪ್ರಸ್ತುತ ಎರಡು ಕಾರ್ಖಾನೆಗಳಲ್ಲೂ ಉದ್ಯೋಗವಿಲ್ಲದೆ ಕಾರ್ಮಿಕರು ಹಾಗು ಅವರ ಅವಲಂಬಿತರು ಬೀದಿ ಪಾಲಾಗಿದ್ದಾರೆ. ಅಲ್ಲದೆ ಜಿಲ್ಲೆಯ ಆರ್ಥಿಕ ಬೆಳವಣಿಗೆ ಸಹ ಕುಠಿತವಾಗಿದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಕಾರ್ಖಾನೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಆಗ್ರಹಿಸಿದ್ದಾರೆ.
ಹೋರಾಟದ ನೇತೃತ್ವ ವಹಿಸಿರುವ ಬಿ.ಎಸ್ ಗಣೇಶ್, ಎರಡು ಕಾರ್ಖಾನೆಗಳ ಉಳಿವಿಗಾಗಿ ನಿರಂತರ ಹೋರಾಟ ನಡೆಯಲಿದೆ. ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಬೇಡಿಕೆಗಳನ್ನು ಈಡೇರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
No comments:
Post a Comment