ಭದ್ರಾವತಿ, ಆ. ೧೬: ಮೆಸ್ಕಾಂ ನಗರ ಉಪವಿಭಾಗ ಘಟಕ-೪ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.೧೮ರಂದು ಬೆಳಿಗ್ಗೆ ೧೦.೩೦ ರಿಂದ ಸಂಜೆ ೫.೩೦ರ ವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.
ಹೊಳೆಹೊನ್ನೂರು ವೃತ್ತ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಸಂತೆ ಮೈದಾನ, ಭೋವಿ ಕಾಲೋನಿ, ಎನ್‌ಎಂಸಿ ರಸ್ತೆ, ಹೊಸಮನೆ, ಸುಭಾಷ್‌ನಗರ, ಹನುಮಂತನಗರ, ವಿಜಯನಗರ, ಶಿವಾಜಿ ವೃತ್ತ, ತಮ್ಮಣ್ಣ ಕಾಲೋನಿ, ಕೇಶವಪುರ, ಕಬಳಿಕಟ್ಟೆ, ಅಶ್ವಸ್ಥನಗರ ಮತ್ತು ಕುವೆಂಪು ನಗರ ಮತ್ತು ಕಣಕಟ್ಟೆ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.
No comments:
Post a Comment