ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಗುರುವಾರ ಶಿವಮೊಗ್ಗ ನಗರಕ್ಕೆ ಆಗಮಿಸುವ ವೇಳೆ ಕೆ.ಎಸ್ ಈಶ್ವರಪ್ಪ ಅವರಿಗೆ ಭದ್ರಾವತಿ ನಗರದಲ್ಲಿ ಬಿಜೆಪಿ ಮಂಡಲ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯಿತು.
ಭದ್ರಾವತಿ, ಆ. ೫: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಗುರುವಾರ ಶಿವಮೊಗ್ಗ ನಗರಕ್ಕೆ ಆಗಮಿಸುವ ವೇಳೆ ಕೆ.ಎಸ್ ಈಶ್ವರಪ್ಪ ಅವರಿಗೆ ನಗರದಲ್ಲಿ ಬಿಜೆಪಿ ಮಂಡಲ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯಿತು.
ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್‌ನಲ್ಲಿರುವ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದ ಮುಂಭಾಗ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗು ಅಭಿಮಾನಿಗಳು ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸುವ ಜೊತೆಗೆ ಸನ್ಮಾನಿಸಿ ಅಭಿನಂದಿಸಿದರು. ಜಿಲ್ಲೆಯ ಹಿರಿಯ ರಾಜಕಾರಣಿಗಳು, ಅನುಭವಿಗಳಾಗಿರುವ ಈಶ್ವರಪ್ಪನವರಿಗೆ ಪುನಃ ಸಚಿವ ಸ್ಥಾನ ಲಭಿಸಿರುವುದು ಸಂತಸದ ವಿಚಾರವಾಗಿದೆ ಎಂದು ಸಂಭ್ರಮ ವ್ಯಕ್ತಪಡಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್, ರಾಜ್ಯ ಪ್ರಕೋಸ್ಟಗಳ ಸಂಯೋಜಕ ಎಂ.ಬಿ ಭಾನುಪ್ರಕಾಶ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಶಿವರಾಜ್, ಜಿಲ್ಲಾ ಖಜಾಂಚಿ ಎಸ್. ರಮೇಶ್, ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಕರ್ನಾಟಕ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿ ಸದಸ್ಯ ಮಂಗೋಟೆ ರುದ್ರೇಶ್, ಸೂಡಾ ಸದಸ್ಯರಾದ ವಿ. ಕದಿರೇಶ್, ರಾಮಲಿಂಗಯ್ಯ, ಬಿ.ಎಸ್ ನಾರಾಯಣಪ್ಪ, ಎಂ.ಎಸ್ ಸುರೇಶಪ್ಪ, ಯುವ ಮೋರ್ಚಾ ಅಧ್ಯಕ್ಷ ವಿಜಯ್, ಮಹಿಳಾ ಘಟಕದ ಪ್ರಮುಖರಾದ ಆರ್.ಎಸ್ ಶೋಭಾ, ಅನ್ನಪೂರ್ಣ ಸಾವಂತ್, ಶೋಭಾ ಪಾಟೀಲ್, ಸುಲೋಚನಾ, ಮಂಜುಳ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment