ಭದ್ರಾವತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮದಡಿ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ 3 ವರ್ಷ ಅವಧಿಯ ನಿಶ್ಚಿತ ಠೇವಣಿಯ ರಾಷ್ಟ್ರೀಯ ಉಳಿತಾಯ ಪತ್ರವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಶುಕ್ರವಾರ ವಿತರಿಸಿದರು.
ಭದ್ರಾವತಿ, ಆ. 27: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಸ್ಪೃಶ್ಯತಾ ನಿವಾರಣಾ ಕಾರ್ಯಕ್ರಮದಡಿ ಅಂತರ್ಜಾತಿ ವಿವಾಹವಾದ ದಂಪತಿಗಳಿಗೆ 3 ವರ್ಷ ಅವಧಿಯ ನಿಶ್ಚಿತ ಠೇವಣಿಯ ರಾಷ್ಟ್ರೀಯ ಉಳಿತಾಯ ಪತ್ರವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಶುಕ್ರವಾರ ವಿತರಿಸಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸುಮಾರು 30ಕ್ಕೂ ಹೆಚ್ಚು ದಂಪತಿಗಳಿಗೆ ಉಳಿತಾಯ ಪತ್ರಗಳನ್ನು ವಿತರಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ. ನಾಗರಾಜ್, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಸಿದ್ದಬಸಪ್ಪ, ಸಹಾಯಕ ನಿರ್ದೇಶಕ ಗ್ರೇಡ್-1 ಎಸ್. ಗೋಪಿನಾಥ್, ವಾರ್ಡ್‌ನ್ ಎಸ್.ವಿ ಶಶಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment