ಭದ್ರಾವತಿ ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಪ್ರವೀಣ್‌ನಾಯಕ್ ನೇಮಕಗೊಂಡಿದ್ದು, ಆದೇಶ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ವಿತರಿಸಿದರು.
ಭದ್ರಾವತಿ, ಆ. ೩೧: ತಾಲೂಕಿನ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಪ್ರವೀಣ್‌ನಾಯಕ್ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಎಸ್.ಆರ್ ಸೌಗಂಧಿಕಾ ಅವರ ಸೂಚನೆ ಮೇರೆಗೆ ಜಿಲ್ಲಾಧ್ಯಕ್ಷ ಎನ್.ಡಿ ಪ್ರವೀಣ್‌ಕುಮಾರ್ ನೇಮಕ ಆದೇಶ ಹೊರಡಿಸಿದ್ದು, ಪಕ್ಷದ ತತ್ವ, ಸಿದ್ದಾಂತಗಳಿಗೆ ಬದ್ಧರಾಗಿ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕೆಂದು ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್ ಸುಂದರೇಶ್ ಆದೇಶ ಪತ್ರವನ್ನು ಪ್ರವೀಣ್‌ನಾಯಕ್ ಅವರಿಗೆ ವಿತರಿಸಿದರು. ಕೆಪಿಸಿಸಿ ಸಾಮಾಜಿಕ ಜಾಲತಾಣದ ತಾಲೂಕು ಅಧ್ಯಕ್ಷ ಸದಾಶಿವಮೂರ್ತಿ, ಉಪಾಧ್ಯಕ್ಷ ವಿನೋದ್, ಗ್ರಾಮಾಂತರ ಕಾರ್ಯದರ್ಶಿ ಹೇಮಾ ನಾಯಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment