ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತವಾಗಿ ನೆರವೇರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಕೊರೋನಾ ವಾರಿಯರ್ಸ್‌ಗಳನ್ನು ಭದ್ರಾವತಿ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಆ. ೫: ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತವಾಗಿ ನೆರವೇರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಕೊರೋನಾ ವಾರಿಯರ್ಸ್‌ಗಳನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸಲು ಕುಟುಂಬ ವರ್ಗದವರೇ ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ ಅದರಲ್ಲೂ ಉಚಿತವಾಗಿ ಮೃತ ದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಂಕಷ್ಟದ ಸಮಯದಲ್ಲಿ ನೆರವಾಗಿ ನಿಂತಿರುವ ಬಜರಂಗದಳ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದ್ದು, ಈ ಯುವಕರ ಸೇವೆಯನ್ನು ನಗರದ ವಿವಿಧ ಸಂಘ-ಸಂಸ್ಥೆಗಳು ಗುರುತಿಸುವ ಮೂಲಕ ಸನ್ಮಾನಿಸಿ ಗೌರವಿಸುತ್ತಿವೆ. ಇದೆ ರೀತಿ ಮಹಿಳಾ ಸೇವಾ ಸಮಾಜದ ವತಿಯಿಂದ ಸಹ ಸನ್ಮಾನಿಸಿ ಗೌರವಿಸಲಾಯಿತು.
ಸಮಾಜದ ಸಂಸ್ಥಾಪಕಿ ರತ್ನಮ್ಮ ಶ್ರೀನಿವಾಸ ಮೂರ್ತಿ ಹಾಗು ಗೌರವಾಧ್ಯಕ್ಷೆ ವಸುಧಾ ಮುಕುಂದ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸಲಾಯಿತು.
ಸಂಘದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶೋಭಾ ಗಂಗಾರಾಜ್, ಖಜಾಂಚಿ ಜಯಂತಿ ನಾಗರಾಜ್ ಶೇಟ್, ಕಮಲಕುಮಾರಿ, ಇಂದಿರಾ ರಮೇಶ್, ಲೋಹಿತಾ ನಂಜಪ್ಪ, ಶಾರದ ಶ್ರೀನಿವಾಸ್, ಡಾ. ವೀಣಾ ಭಟ್, ರೈಲ್ವೆ ಸಲಹಾ ಸಮಿತಿ ಸದಸ್ಯ ಎನ್. ವಿಶ್ವನಾಥರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
No comments:
Post a Comment