ಭದ್ರಾವತಿ ಪೀಪಲ್ ಲಿಬರೇಷನ್ (ಬಿ ಪಿ ಎಲ್) ನೂತನ ಸಂಘ ಹಾಗು ೭೫ನೇ ಸ್ವಾತ್ರ್ಯೋತ್ಸವ ಸಮಾರಂಭವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
ಭದ್ರಾವತಿ, ಆ. ೧೬: ನ್ಯಾಯಕ್ಕಾಗಿ, ಬಡವರಿಗಾಗಿ ಹೋರಾಟ ನಡೆಸುವವರಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ಎಂದು ಶಾಸಕ ಬಿ ಕೆ ಸಂಗಮೇಶ್ವರ್ ಹೇಳಿದರು.
ಅವರು ನ್ಯೂಟೌನ್ ಭದ್ರಾವತಿ ಪೀಪಲ್ ಲಿಬರೇಷನ್(ಬಿಪಿಎಲ್) ನೂತನ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.
ಅಧಿಕಾರಿಗಳು, ರಾಜಕಾರಣಿಗಳು ಯಾರೇ ಆಗಿರಲಿ ತಪ್ಪು ಮಾಡುವವರ ವಿರುದ್ಧ ಹೋರಾಟ ನಡೆಸಿ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸಬೇಕು. ಅಸಹಾಯಕರು, ನಿರ್ಗತಿಕರು, ಬಡವರಿಗೆ ನೆರವಾಗಬೇಕು. ಸಂಘದ ಸದಸ್ಯರೆಲ್ಲರೂ ಒಟ್ಟಾಗಿ ಮುನ್ನಡೆಯಬೇಕೆಂದರು.
ಕೊರೋನಾ ಸಂದರ್ಭದಲ್ಲಿ ಅಸಹಾಯಕರು, ನಿರ್ಗತಿಕರು ಹಾಗು ಬಡವರ ಹಸಿವನ್ನು ನೀಗಿಸುವಲ್ಲಿ ಸಂಘದ ಸದಸ್ಯರೆಲ್ಲರೂ ಒಟ್ಟಾಗಿ ನಡೆಸಿದ ಸೇವಾ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಸಂಘದ ಗೌರವಾಧ್ಯಕ್ಷ ಎಸ್.ಕೆ ಸುಧೀಂದ್ರ ಮಾತನಾಡಿ, ಸಂಘದ ಮೂಲ ಉದ್ದೇಶ ನಿರ್ಗತಿಕರು, ಅಸಹಾಯಕರು ಹಾಗೂ ಬಡವರಿಗೆ ನೆರವಾಗಬೇಕೆಂಬುದಾಗಿದೆ. ಸದಸ್ಯರೆಲ್ಲರೂ ಬಡವರ್ಗದವರೇ ಆಗಿದ್ದು, ಇಲ್ಲಿ ಯಾವುದೇ ರೀತಿಯ ಹಣದ ವಹಿವಾಟು ಇಲ್ಲ. ಹೋರಾಟದ ಮೂಲಕ ನ್ಯಾಯ ಒದಗಿಸಿಕೊಡುವುದು. ಸರ್ಕಾರದ ಸೌಲಭ್ಯಗಳು ನಿಜವಾದ ಫಲಾನುಭವಿಗಳಿಗೆ ತಲುಪಿಸುವುದು ಸೇರಿದಂತೆ ಹಲವಾರು ಉದ್ದೇಶಗಳನ್ನಿಟ್ಟುಕೊಂಡು ಸಂಘವನ್ನು ಸ್ಥಾಪಿಸಲಾಗಿದೆ ಎಂದರು.
ಪತ್ರಕರ್ತ ಸುರೇಶ್ ಮಾತನಾಡಿ, ಇಂದು ಅನ್ಯಾಯಗಳ ವಿರುದ್ಧ ಪ್ರಶ್ನಿಸುವ ಮನೋಭಾವ ಕಣ್ಮರೆಯಾಗುತ್ತಿದೆ. ಇದರಿಂದ ಭ್ರಷ್ಟಾಚಾರಗಳು ಹೆಚ್ಚಾಗುತ್ತಿರುವುದು ವಿಪರ್ಯಾಸದ ಸಂಗತಿ. ಯಾವುದನ್ನೂ ಸಹ ಪ್ರಶ್ನಿಸದ ಕಾರಣ ಇಂದು ನಾವುಗಳು ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳ ಯಂತ್ರಗಳು ಸ್ಥಗಿತಗೊಂಡು ಉದ್ಯೋಗವಿಲ್ಲದೆ ಸಂಕಷ್ಟದಲ್ಲಿ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಸಂಘ ಹೆಸರಿಗೆ ತಕ್ಕಂತೆ ಹೋರಾಟದಲ್ಲೂ ಕೂಡ ಮುಂಚೂಣಿಯಲ್ಲಿರಬೇಕೆಂದರು.
ಸಂಘದ ಅಧ್ಯಕ್ಷ ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕರು ಮಾರಿಯಮ್ಮ ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕುಪ್ಪಸ್ವಾಮಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ತಾಲೂಕು ಅಧ್ಯಕ್ಷ ಸದಾಶಿವಮೂರ್ತಿ, ನಗರಸಭಾ ಸದಸ್ಯ ಕೆ. ಸುದೀಪ್ ಕುಮಾರ್, ಮುಖಂಡ ನರಸಿಂಹಮೂರ್ತಿ, ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಲತಾಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸಂಘದ ಕಾರ್ಯಾಧ್ಯಕ್ಷ ಎಂ ರವಿಕುಮಾರ್, ಉಪಾಧ್ಯಕ್ಷರಾದ ಸಂಪತ್ ಕುಮಾರ್, ಜಿ. ಗೋವಿಂದ, ಪ್ರಧಾನ ಕಾರ್ಯದರ್ಶಿ ಶ್ಯಾಮುವೇಲ್, ಕಾರ್ಯದರ್ಶಿ ಎಂ.ಸಿ ಸುನೀಲ್ ಕುಮಾರ್, ಸಂಘಟನಾ ಕಾರ್ಯದರ್ಶಿ ಲೋಕೇಶ್, ಸಹ ಕಾರ್ಯದರ್ಶಿಗಳಾದ ರವೀಂದ್ರ, ಅಜಂತ ಕುಮಾರ್, ಖಜಾಂಚಿ ಎ.ವಿ ಮುರಳಿಕೃಷ್ಣ ಹಾಗು ಸದಸ್ಯರಾದ ಮುತ್ತುಕುಮಾರನ್ ಮಾಯಪ್ಪ, ಶಂಕರ್, ಕರುಣಾನಿಧಿ, ನವೀನ್, ಪ್ರಶಾಂತ್, ಶ್ರೀನಿವಾಸ್, ವೆಂಕಟೇಶ್, ಶ್ರೀಕಾಂತ್, ಸಂಜೀವರೆಡ್ಡಿ, ಅಭಿಲಾಶ್, ಯೋಗೇಶ್, ಹರ್ಷ, ಸಂದೀಪ, ಅನಿಲ್, ಸತೀಶ್, ಸುಬ್ಬು, ಮಂಜುನಾಥ್, ರಾಬರ್ಟ್, ಯೋಹಾನ್, ಮೋಹನ್ ಮತ್ತು ರಜಾಲಿ ಬೇಗ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment