Monday, August 9, 2021

ವಿವಿಧ ಬೇಡಿಕೆ ಈಡೇರಿಕೆಗೆ ನಗರಸಭೆ ಪೌರಾಯುಕ್ತರಿಗೆ ಮನವಿ

ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೋಮವಾರ ಭದ್ರಾವತಿ ನಗರಸಭೆ ಪೌರಾಯುಕ್ತ ಕೆ. ಪರಮೇಶ್‌ರವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.  
    ಭದ್ರಾವತಿ, ಆ. ೯:  ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್ ಗೌಡ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೋಮವಾರ ಪೌರಾಯುಕ್ತ ಕೆ. ಪರಮೇಶ್‌ರವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.  
     ಜಿಲ್ಲಾಧಿಕಾರಿಗಳ ವಿಶೇಷ ಅನುದಾನದಲ್ಲಿ ೧ ಕೋ. ರು. ವೆಚ್ಚದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಬಡವರಿಗೆ ನ್ಯಾಯಬೆಲೆ ಅಂಗಡಿ ಮೂಲಕ ಉಚಿತ ದಿನಸಿ ಸಾಮಗ್ರಿ ವಿತರಿಸಲಾಗುತ್ತಿದ್ದು, ಇದುವರೆಗೂ ಶೇ.೪೦ರಷ್ಟು ಮಾತ್ರ ದಿನಸಿ ಸಾಮಗ್ರಿಗಳನ್ನು ವಿತರಿಸಲಾಗಿದೆ. ಉಳಿದ ಶೇ.೬೦ರಷ್ಟು ಆಹಾರ ಸಾಮಗ್ರಿಗಳನ್ನು ತಕ್ಷಣ ವಿತರಿಸುವಂತೆ ಒತ್ತಾಯಿಸಿದ್ದಾರೆ.
    ವಾರ್ಡ್ ನಂ. ೩೨ರ ಫಿಲ್ಟರ್‌ಶೆಡ್‌ನಲ್ಲಿ ಚರಂಡಿ, ರಸ್ತೆ  ಸೇರಿದಂತೆ ಮೂಲ ಸೌಕರ್ಯಗಳ ಕೊರತೆಯಿದ್ದು ತಕ್ಷಣ ಕ್ರಮ ಕೈಗೊಳ್ಳುವಂತೆ ಹಾಗು ಇದೆ ವಾರ್ಡ್‌ನಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರತಿದಿನ ನೂರಾರು ಮಂದಿ ಬರುತ್ತಿದ್ದು, ಆರೋಗ್ಯ ಕೇಂದ್ರದ ಮುಂಭಾಗ ಮಳೆ, ಬಿಸಿಲಿನಿಂದ ರಕ್ಷಣೆ ಪಡೆಯಲು ಮತ್ತು ಕುಳಿತುಕೊಳ್ಳಲು ಯಾವುದೇ ಸೌಲರ್ಭ್ಯಗಳು ಇಲ್ಲದ ಕಾರಣ ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನಲೆಯಲ್ಲಿ ಈ ಹಿನ್ನಲೆಯಲ್ಲಿ ಮೇಲ್ಛಾವಣಿ ವ್ಯವಸ್ಥೆ ಮತ್ತು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗ್ರಹಿಸಿದ್ದಾರೆ.

No comments:

Post a Comment