ಭದ್ರಾವತಿ, ಆ. ೨೮: ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನಲೆಯಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ಆ.೩೦ರಂದು ಪ್ರಾಣಿವಧೆ, ಮಾಂಸ ಮಾರಾಟ ಹಾಗು ಮಾಂಸಹಾರ ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕುರಿ, ಕೋಳಿ ಮತ್ತು ಇತರೆ ಮಾಂಸ ಮಾರಾಟಗಾರರು ಮಾಂಸ ಮಾರಾಟ ಮಾಡುವುದನ್ನು ಹಾಗು ಬಾರ್ & ರೆಸ್ಟೋರೆಂಟ್ ಮತ್ತು ಮಾಂಸಹಾರಿ ಹೋಟೆಲ್‌ಗಳಲ್ಲಿ ಮಾಂಸಹಾರ ತಯಾರಿಸುವುದನ್ನು ಸಹ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ನಗರಸಭೆ ಪೌರಾಯುಕ್ತರು ಎಚ್ಚರಿಸಿದ್ದಾರೆ.
No comments:
Post a Comment