ರಾಜೀವ್ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ರನ್ ಫಾರ್ ರಾಜೀವ್ ೫ ಕಿ.ಮೀ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಭದ್ರಾವತಿ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸ್ಕೌಟ್ಸ್ ಮತ್ತು ರೋವರ್ ೫ ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಭದ್ರಾವತಿ, ಆ. ೧೯: ರಾಜೀವ್ ಜನ್ಮ ದಿನಾಚರಣೆ ಅಂಗವಾಗಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ರನ್ ಫಾರ್ ರಾಜೀವ್ ೫ ಕಿ.ಮೀ ಮ್ಯಾರಾಥಾನ್ ಸ್ಪರ್ಧೆಯಲ್ಲಿ ನಗರದ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸ್ಕೌಟ್ಸ್ ಮತ್ತು ರೋವರ್ ೫ ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ಮ್ಯಾರಥಾನ್ ಸ್ಪರ್ಧೆಯಲ್ಲಿ ಸುಮಾರು ೫೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಈ ಪೈಕಿ ಮೊದಲ ೧೦ ಸ್ಥಾನಗಳಲ್ಲಿ ಆರ್.ಮನೋಜ್, ಎಂ.ಸಚಿನ್. ಸುರೇಶ್ ರಾಥೋಡ್, ಎ.ನಾಗರಾಜ ಮತ್ತು ಮುನೀರ್ ಪಾಷ ಸೇರಿದಂತೆ ೫ ವಿದ್ಯಾರ್ಥಿಗಳು ಸ್ಥಾನ ಪಡೆದುಕೊಂಡಿದ್ದಾರೆ.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ಬಿ.ಕೆ. ಸಂಗಮೇಶ್ವರ್ ಹಾಗು ಸದಸ್ಯರು, ಪ್ರಾಂಶುಪಾಲ ಡಾ.ಎಂ.ಜಿ ಉಮಾ ಶಂಕರ್, ರೋವರ್ ಲೀಡರ್ ಪ್ರೊ.ಎಸ್. ವರದರಾಜ, ದೈಹಿಕ ಶಿಕ್ಷಣ ನಿರ್ದೇಶಕ ಎಂ.ಡಿ ವಿಶ್ವನಾಥ್, ಯೋಗೇಶ್, ಶಫಿ, ದೇವರಾಜ ಅರಸ್ ಹಾಗು ಬೋಧಕ ಮತ್ತು ಬೋಧಕೇತರ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
No comments:
Post a Comment