ಭದ್ರಾವತಿ ವೀರಾಪುರ ಗ್ರಾಮದಲ್ಲಿ ಸಂಸದ ಬಿ.ವೈ ರಾಘವೇಂದ್ರ ಹುಟ್ಟುಹಬ್ಬದ ಅಂಗವಾಗಿ ರೈತರಿಗೆ ತೆಂಗಿನ ಸಸಿಗಳನ್ನು ವಿತರಿಸಲಾಯಿತು.
ಭದ್ರಾವತಿ, ಆ. ೧೬: ನಗರದ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ ವತಿಯಿಂದ ಕಳೆದ ೧೨ ವರ್ಷಗಳಿಂದ ಶಿವಮೊಗ್ಗ ಲೋಕಸಭಾ, ಯುವ ನಾಯಕ ಬಿ.ವೈ ರಾಘವೇಂದ್ರ ಅವರ ಜನ್ಮದಿನ ವಿಶೇಷವಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ತಾಲೂಕು ಪಂಚಾಯಿತಿ ಸದಸ್ಯ, ಬಿಜೆಪಿ ಪಕ್ಷದ ಯುವ ಮುಖಂಡ ಕೆ. ಮಂಜುನಾಥ್ ನೇತೃತ್ವದಲ್ಲಿ ಅಭಿಮಾನಿಗಳ ಬಳಗದಿಂದ ತಾಲೂಕು ಸರ್ಕಾರಿ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ರೈತರಿಗೆ ತೆಂಗಿನ ಸಸಿ ವಿತರಣೆ, ನಿರ್ಗತಿಕರು, ಅಸಹಾಯಕರು, ವಿಕಲಚೇತನರಿಗೆ ನೆರವು, ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗು ಲೇಖನ ಸಾಮಾಗ್ರಿಗಳ ವಿತರಣೆ ಸೇರಿದಂತೆ ಹಲವಾರು ರೀತಿಯ ವಿಭಿನ್ನವಾದ ಸಾಮಾಜಿಕ ಕಾರ್ಯಗಳನ್ನು ಹುಟ್ಟುಹಬ್ಬದಂದು ಕೈಗೊಳ್ಳಲಾಗುತ್ತಿದೆ.
ಈ ಬಾರಿ ಸಹ ತಾಲೂಕಿನ ವೀರಪುರ ಗ್ರಾಮದಲ್ಲಿ ಒಟ್ಟು ಸುಮಾರು ೧ ಸಾವಿರ ತೆಂಗಿನ ಸಸಿಗಳನ್ನು ರೈತರಿಗೆ ವಿತರಿಸಲಾಯಿತು. ಸಂಸದ ಬಿ.ವೈ ರಾಘವೇಂದ್ರ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಹೊಸಮನೆ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಮೆಸ್ಕಾಂ ಲೈನ್‌ಮೆನ್‌ಗಳಿಗೆ ಹಾಗು ನಗರಸಭೆ ಪೌರಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಸ್ ಜ್ಯೋತಿ ಪ್ರಕಾಶ್, ಸದಸ್ಯರಾದ ವಿ. ಕದಿರೇಶ್, ರಾಮಲಿಂಗಯ್ಯ, ಹಟ್ಟಿ ಚಿನ್ನದ ಗಣಿ ಕಂಪನಿ ಆಡಳಿತ ಮಂಡಳಿ ನಿರ್ದೇಶಕ ಕೂಡ್ಲಿಗೆರೆ ಹಾಲೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ತಾಲೂಕು ಅಧ್ಯಕ್ಷ ಎಂ. ಪ್ರಭಾಕರ್, ಅರಳಿಹಳ್ಳಿ ಪ್ರಕಾಶ್, ಗಣಪತಿಭಟ್, ಗ್ರಾಮ ಪಂಚಾಯಿತಿ ಸದಸ್ಯರಾದ ಸರಸ್ವತಿ, ಲೋಲಾಕ್ಷಿ, ರಂಗಸ್ವಾಮಿ, ನಗರಸಭಾ ಸದಸ್ಯರಾದ ಅನಿತಾ ಮಲ್ಲೇಶ್, ಶಶಿಕಲಾ ನಾರಾಯಣಪ್ಪ, ಮಣಿ ಎಎನ್‌ಎಸ್, ಯುವ ಕಾಂಗ್ರೆಸ್ ಅಧ್ಯಕ್ಷ ಜಿ. ವಿನೋದ್, ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಪಾಟೀಲ್ ಹಾಗು ಹಿಂದೂ ಮಹಾಸಭಾ ಹಿಂದೂ ರಾಷ್ಟ್ರಸೇನಾ ವಿನಾಯಕ ಸೇವಾ ಸಮಿತಿ ಪ್ರಮುಖರು, ಸ್ಥಳಿಯ ಮುಖಂಡರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿಯಲ್ಲಿ ಬಿ.ವೈ ರಾಘವಂದ್ರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಹೊಸಮನೆ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಮೆಸ್ಕಾಂ ಲೈನ್‌ಮೆನ್‌ಗಳಿಗೆ ಹಾಗು ಪೌರಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
No comments:
Post a Comment