ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನ ಕೆರೆ ಕಾಲೋನಿ ಮುಖ್ಯ ರಸ್ತೆಯಲ್ಲಿರುವ ತುಂಬಾ ಹಳೇಯದಾದ ಅಪಾಯಕ್ಕೆ ಎಡೆಮಾಡಿಕೊಡುವಂತಿರುವ ಕಿರಿದಾದ ಸೇತುವೆ.
ಭದ್ರಾವತಿ, ಆ. ೮: ತಾಲೂಕಿನ ಮಾವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನ ಕೆರೆ ಕಾಲೋನಿ ಮುಖ್ಯ ರಸ್ತೆಯಲ್ಲಿ ತುಂಬಾ ಹಳೇಯದಾದ ಕಿರಿದಾದ ಸೇತುವೆ ಇದ್ದು, ಸೇತುವೆ ಎರಡು ಬದಿಯಲ್ಲಿ ಸಣ್ಣದಾದ ತಡೆಗೋಡೆ ನಿರ್ಮಿಸಲಾಗಿದೆ. ಇದು ಅಪಾಯಕ್ಕೆ ಎಡೆ ಮಾಡಿಕೊಡುವಂತಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಗಮನ ಹರಿಸಬೇಕಾಗಿದೆ.
ನಗರ ಪ್ರದೇಶದಿಂದ ಸುಮಾರು ೧೦ ಕಿ.ಮೀ ದೂರದಲ್ಲಿರುವ ಗ್ರಾಮೀಣ ಪ್ರದೇಶವಾಗಿರುವ ಮಾವಿನಕೆರೆ ಕಾಲೋನಿ ಮುಖ್ಯ ರಸ್ತೆಯಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಮಾವಿನ ಕೆರೆ ಗ್ರಾಮಕ್ಕೆ ಸಂಪರ್ಕಗೊಂಡಿರುವ ರಸ್ತೆ ಎರೇಹಳ್ಳಿ, ತಾಷ್ಕೆಂಟ್‌ನಗರದ ಮೂಲಕ ಮಾರುತಿ ನಗರದ ಬಳಿ ಮುಖ್ಯ ಹೆದ್ದಾರಿಗೆ ಸಂಪರ್ಕಗೊಂಡಿದೆ. ಮಾವಿನ ಕೆರೆ ಗ್ರಾಮದಲ್ಲಿ ಮಾತ್ರ ರಸ್ತೆ ಕಾಮಗಾರಿ ಅಪೂರ್ಣಗೊಂಡಿದೆ. ರಸ್ತೆ ಡಾಂಬರು ಕಾಣದೆ ಕಲ್ಲು ಮಣ್ಣಿನಿಂದ ಕೂಡಿದೆ. ಈ ನಡುವೆ ಈ ಕಿರಿದಾದ ಸೇತುವೆ ಅಪಾಯಕ್ಕೆ ಎಡೆಮಾಡಿಕೊಡುವಂತೆ ಕಂಡು ಬರುತ್ತಿದೆ.
ತಕ್ಷಣ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಹಳೇಯದಾದ ಸೇತುವೆ ಬದಲಿ ಹೊಸ ಸೇತುವೆ ನಿರ್ಮಿಸುವ ಮೂಲಕ ಸೇತುವೆ ಎರಡು ಬದಿಯಲ್ಲೂ ಎತ್ತರಕ್ಕೆ ತಡೆಗೋಡೆ ನಿರ್ಮಿಸಬೇಕಾಗಿದೆ.
No comments:
Post a Comment