ಎಸ್.ಜಿ ನಾಗರಾಜ್
ಭದ್ರಾವತಿ, ಆ. ೯: ಶಿವಮೊಗ್ಗ ಜಿಲ್ಲಾ ಮಡಿವಾಳ ಸಮಾಜದ ಉಪಾಧ್ಯಕ್ಷ, ನಗರದ ಬಿ.ಎಚ್ ರಸ್ತೆ ಹಾಲಪ್ಪ ವೃತ್ತ ಸಮೀಪದ ನಿವಾಸಿ ಎಸ್.ಜಿ ನಾಗರಾಜ್ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರಿಯನ್ನು ಹೊಂದಿದ್ದರು. ಎಸ್.ಜಿ ನಾಗರಾಜ್ ಎಸ್‌ಬಿಐ ಬ್ಯಾಂಕ್ ನೌಕರರಾಗಿದ್ದು, ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಇವರ ಅಂತ್ಯಕ್ರಿಯೆ ಹುತ್ತಾಕಾಲೋನಿ ಹಿಂದೂ ರುದ್ರ ಭೂಮಿಯಲ್ಲಿ ನೆರವೇರಿತು.
ಎಸ್.ಜಿ ನಾಗರಾಜ್ ಮಡಿವಾಳ ಸಮಾಜ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನ ಮೆಸ್ಕಾಂ ನಿವೃತ್ತ ಅಭಿಯಂತರ ಕೃಷ್ಣಮೂರ್ತಿ, ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ, ನಗರ ಸಭಾ ಸದಸ್ಯರಾದ ಬಿ.ಕೆ ಮೋಹನ್, ರೇಖಾ ಪ್ರಕಾಶ್, ಅಖಿಲ ಭಾರತ ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ ಮುಖಂಡರಾದ ಸಿದ್ದಲಿಂಗಯ್ಯ, ಮಡಿವಾಳ ಸಮಾಜದ ತಾಲೂಕು ಅಧ್ಯಕ್ಷ ಪುರುಷೋತ್ತಮ್, ವೆಂಕಟೇಶ್, ಜಿಲ್ಲಾಧ್ಯಕ್ಷ ಎಂ.ಎಸ್ ಸುರೇಶ್, ದಯಾನಂದ್, ನೆಲಗದ್ದೆ ಮಂಜಣ್ಣ, ದಿನೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment