ಸಾಮಾಜಿಕ ಕಾರ್ಯ ಯೋಜನೆಯಡಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭದ್ರಾವತಿ ಸಿದ್ಧಾರೂಢ ನಗರದಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದ ಕಟ್ಟಡ ಅಭಿವೃದ್ಧಿ ಕಾಮಗಾರಿಗಳಿಗೆ ರು. ೨ ಲಕ್ಷ ಆರ್ಥಿಕ ನೆರವು ನೀಡಲಾಯಿತು.
ಭದ್ರಾವತಿ, ಆ. ೧೨: ಸಾಮಾಜಿಕ ಕಾರ್ಯ ಯೋಜನೆಯಡಿ ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಿದ್ಧಾರೂಢ ನಗರದಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದ ಕಟ್ಟಡ ಅಭಿವೃದ್ಧಿ ಕಾಮಗಾರಿಗಳಿಗೆ ರು. ೨ ಲಕ್ಷ ಆರ್ಥಿಕ ನೆರವು ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆಯವರ ಆಶಯದಂತೆ ಹಲವಾರು ವರ್ಷಗಳಿಂದ ನಿರಂತರವಾಗಿ ಸಾಮಾಜಿಕ ಸೇವಾ ಕಾರ್ಯಗಳಿಗೆ ಯೋಜನೆವತಿಯಿಂದ ಆರ್ಥಿಕ ನೆರವು ನೀಡಲಾಗುತ್ತಿದೆ.
ಗುರುವಾರ ರು.೨ ಲಕ್ಷ ನೆರವಿನ ಚೆಕನ್ನು ದೇವಸ್ಥಾನ ಸಂಕರ್ಷಣ ಧರ್ಮ ಸಂಸ್ಥೆ ಟ್ರಸ್ಟ್‌ಗೆ ಯೋಜನಾಧಿಕಾರಿ ಪ್ರಕಾಶ್ ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಜಿ. ಆನಂದಕುಮಾರ್ ಸಮ್ಮುಖದದಲ್ಲಿ ವಿತರಿಸಿದರು.
ವಲಯದ ಮೇಲ್ವಿಚಾರಕ ವಿ.ಎನ್ ಪ್ರಶಾಂತ್, ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ವಾಸು ವೇದಮೂರ್ತಿ, ಉಪಾಧ್ಯಕ್ಷ ರಾಘವೇಂದ್ರ, ಸುಬ್ರಮಣ್ಯ, ಎಚ್. ಮಧುಸೂದನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment