ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಚುನಾವಣೆಯಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿದ ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ಅನಿಲ್‌ಕುಮಾರ್ ಅವರಿಗೆ ಚುನಾವಣಾಧಿಕಾರಿ, ತೋಟಗಾರಿಕೆ ಇಲಾಖೆ ಜಿಲ್ಲಾ ಉಪನಿರ್ದೇಶಕ ಡಾ. ರಾಮಚಂದ್ರ ಮಡಿವಾಳ್ ಹಾಗು ಸಹಾಯಕ ಚುನಾವಣಾಧಿಕಾರಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಾಂತರಾಜ್ ಮತ್ತು ತಾಲೂಕು ಚುನಾವಣಾಧಿಕಾರಿ, ತಹಸೀಲ್ದಾರ್ ಆರ್. ಪ್ರದೀಪ್ ಪ್ರಮಾಣ ಪತ್ರ ವಿತರಿಸಿದರು.
ಭದ್ರಾವತಿ, ಆ. ೬: ನಗರಸಭೆ ವಾರ್ಡ್ ನಂ.೨೯ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ಅನಿಲ್‌ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ೪೫೦ ಮತಗಳ ಅಂತರದಿಂದ ಭರ್ಜರಿಯಾಗಿ ಗೆಲುವು ಸಾಧಿಸಿದ್ದಾರೆ.
ತಾಲೂಕು ಕಛೇರಿ ಸಭಾಂಗಣದಲ್ಲಿ ಬೆಳಿಗ್ಗೆ ೮ ಗಂಟೆಗೆ ಮತ ಎಣಿಕೆ ಆರಂಭಗೊಂಡು ಕೇವಲ ೩೦ ನಿಮಿಷದಲ್ಲಿ ಫಲಿತಾಂಶ ಪ್ರಕಟಗೊಂಡಿತು. ಜೆಡಿಎಸ್ ಅಭ್ಯರ್ಥಿ ಆರ್. ನಾಗರತ್ನ ಅನಿಲ್‌ಕುಮಾರ್ ೧೨೮೨ ಮತಗಳನ್ನು, ಕಾಂಗ್ರೆಸ್ ಅಭ್ಯರ್ಥಿ ಬಿ.ಜಿ ಲೋಯಿತಾ ನಂಜಪ್ಪ ೮೩೨ ಮತಗಳನ್ನು ಹಾಗು ಬಿಜೆಪಿ ಅಭ್ಯರ್ಥಿ ರಮಾ ವೆಂಕಟೇಶ್ ಕೇವಲ ೭೦ ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು ೨೨೦೦ ಮಂದಿ ಮತ ಚಲಾಯಿಸಿದ್ದು, ಈ ಪೈಕಿ ೧೬ ನೋಟಾ ಮತಗಳು ಚಲಾವಣೆಯಾಗಿವೆ.
ಕಾಂಗ್ರೆಸ್ ಅಭ್ಯರ್ಥಿ ಬಿ.ಜಿ ಲೋಯಿತಾ ನಂಜಪ್ಪ ವಿರುದ್ಧ ಸುಮಾರು ೪೫೦ ಮತಗಳ ಅಂತರದಿಂದ ಗೆಲುವು ಸಾಧಿಸಿದ ಆರ್. ನಾಗರತ್ನ ಅನಿಲ್‌ಕುಮಾರ್ ಅವರಿಗೆ ಚುನಾವಣಾಧಿಕಾರಿ, ತೋಟಗಾರಿಕೆ ಇಲಾಖೆ ಜಿಲ್ಲಾ ಉಪನಿರ್ದೇಶಕ ಡಾ. ರಾಮಚಂದ್ರ ಮಡಿವಾಳ್ ಹಾಗು ಸಹಾಯಕ ಚುನಾವಣಾಧಿಕಾರಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಾಂತರಾಜ್ ಮತ್ತು ತಾಲೂಕು ಚುನಾವಣಾಧಿಕಾರಿ, ತಹಸೀಲ್ದಾರ್ ಆರ್. ಪ್ರದೀಪ್ ಪ್ರಮಾಣ ಪತ್ರ ವಿತರಿಸಿದರು.
ನಗರಸಭೆ ೩೫ ವಾರ್ಡ್‌ಗಳಿಗೆ ಚುನಾವಣಾ ಆಯೋಗ ಚುನಾವಣೆ ಘೋಷಿಸಿದ್ದ ಸಂದರ್ಭದಲ್ಲಿ ವಾರ್ಡ್ ನಂ.೨೯ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರದ ವೇಳೆ ಹೃದಯಾಘಾತದಿಂದ ನಿಧನ ಹೊಂದಿದ್ದರು. ಈ ಹಿನ್ನಲೆಯಲ್ಲಿ ಚುನಾವಣೆ ನಡೆದಿದ್ದು, ಜೆಡಿಎಸ್ ತನ್ನ ತೆಕ್ಕೆಯಲ್ಲಿರುವ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ಕುಟುಂಬ ವರ್ಗದವರು ನಡೆಸಿದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ.
ಪ್ರಸ್ತುತ ನಗರಸಭೆ ೩೫ ವಾರ್ಡ್‌ಗಳಲ್ಲಿ ಕಾಂಗ್ರೆಸ್-೧೮, ಜೆಡಿಎಸ್-೧೨, ಬಿಜೆಪಿ-೪ ಮತ್ತು ಪಕ್ಷೇತರ-೧ ಸ್ಥಾನ ಹೊಂದಿವೆ. ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ.
No comments:
Post a Comment