ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಭದ್ರಾವತಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಹೆಸರನ್ನು ನಾಮಕರಣಗೊಳಿಸುವುದು, ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಜಿಲ್ಲಾ ಉಸ್ತುವಾರಿ ಹಾಗು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೧: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಗರದ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಹೆಸರನ್ನು ನಾಮಕರಣಗೊಳಿಸುವುದು, ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಒತ್ತಾಯಿಸುವಂತೆ ಜಿಲ್ಲಾ ಉಸ್ತುವಾರಿ ಹಾಗು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯಿತು.
೩ ಬಾರಿ ಶಾಸಕರಾಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ, ಬಡ, ಮಧ್ಯಮ ಹಾಗು ಎಲ್ಲಾ ವರ್ಗದ ಜನರ ಏಳಿಗೆಗಾಗಿ ಹಗಲಿರುಳು ಶ್ರಮಿಸಿರುವ ದಿವಂಗತ ಎಂ.ಜೆ ಅಪ್ಪಾಜಿ ಅವರ ಹೆಸರನ್ನು ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್‌ನಿಲ್ದಾಣಕ್ಕೆ ನಾಮಕರಣಗೊಳಿಸುವಂತೆ ಕೋರಲಾಗಿದೆ.
ನಗರದ ಹೃದಯ ಭಾಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದಲ್ಲಿ ೨೦೧೭ರಲ್ಲಿ ಆರಂಭಗೊಂಡಿರುವ ಡಾ.ಬಿ.ಆರ್ ಅಂಬೇಡ್ಕರ್ ಭವನ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು, ಸರ್ಕಾರದಿಂದ ಬಿಡುಗಡೆಯಾಗಿರುವ ೨ ಕೋ. ರು. ಹಾಗು ನಗರಸಭೆ ವತಿಯಿಂದ ಬಿಡುಗಡೆಯಾಗಿರುವ ೫೦ ಲಕ್ಷ ರು. ಅನುದಾನದಲ್ಲಿ ಇದುವರೆಗೂ ಕಾಮಗಾರಿ ನಡೆದಿದ್ದು, ಇದೀಗ ಅರ್ಧಕ್ಕೆ ಸ್ಥಗಿತಗೊಂಡಿದೆ. ಪೂರ್ಣಗೊಳ್ಳಲು ಇನ್ನೂ ೫.೫ ಕೋ. ರು. ಅವಶ್ಯಕತೆ ಇದ್ದು, ತಕ್ಷಣ ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅನುದಾನ ಬಿಡುಗಡೆ ಮಾಡಿಸಿಕೊಡುವಂತೆ ಮನವಿ ಮಾಡಲಾಗಿದೆ.
ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಅಕ್ರಮ್‌ಖಾನ್, ಉಪಾಧ್ಯಕ್ಷರಾದ ಬ್ರಹ್ಮಲಿಂಗಯ್ಯ, ಎಂ.ವಿ ಚಂದ್ರಶೇಖರ್ ಹಾಗು ಪದಾಧಿಕಾರಿಗಳು ಮನವಿ ಸಲ್ಲಿಸುವ ಜೊತೆಗೆ ಸಚಿವ ಈಶ್ವರಪ್ಪ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
No comments:
Post a Comment