ಭದ್ರಾವತಿ, ಸೆ. ೧೨: ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಸೆ.೧೩ರಂದು ಬೆಳಿಗ್ಗೆ ೧೦.೩೦ಕ್ಕೆ ವಿವಿಧ ಸಂಘಟನೆಗಳಿಂದ ಪ್ರತಿಭಟನಾ ಮೆರವಣಿ ಹಮ್ಮಿಕೊಳ್ಳಲಾಗಿದೆ.
ಕಳೆದ ವಾರ ದೆಹಲಿಯ ಪೊಲೀಸ್ ಅಧಿಕಾರಿ ರಾಬೀಯಾ ಸೈಫಿ ಅವರನ್ನು ಅತ್ಯಾಚಾರ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಅಲ್ಲದೆ ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡುವ ಜೊತೆಗೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಪ್ರತಿಭಟನಾ ಹೋರಾಟ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗು ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ವತಿಯಿಂದ ಹಮ್ಮಿಕೊಳ್ಳಲಾಗಿದೆ.
ಮಾಧವಚಾರ್ ವೃತ್ತದಿಂದ ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು ವಿವಿಧ ಸಂಘ-ಸಂಸ್ಥೆಗಳು, ಕಾರ್ಮಿಕರು, ರೈತರು, ವ್ಯಾಪರಸ್ಥರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿದಂತೆ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment