Saturday, September 4, 2021

ಸೆ.೫ರಂದು ಶ್ರೀಗಳ ತಪೋನುಷ್ಠಾನ ಸಮಾರೋಪ, ದಾಸೋಹ ಮಂದಿರ ಉದ್ಘಾಟನೆ

ಶ್ರೀ ಸಿದ್ದಲಿಂಗಮಹಾಸ್ವಾಮೀಜಿ
    ಭದ್ರಾವತಿ, ಏ. ೯: ತಾಲೂಕಿನ ಸುಕ್ಷೇತ್ರ ಗೋಣಿಬೀಡಿನ ಶ್ರೀ ಶೀಲಸಂಪಾದನಾಮಠದಲ್ಲಿ ಸೆ.೫ರ ಬೆಳಿಗ್ಗೆ ೧೧ ಗಂಟೆಗೆ ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ ೨೩ ತಿಂಗಳ ತಪೋನುಷ್ಠಾನ ಸಮಾರೋಪ ಹಾಗು ದಾಸೋಹ ಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದೆ.
    ತುಮಕೂರು ಸುಕ್ಷೇತ್ರ ಶ್ರೀ ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ತಾವರೆಕೆರೆ ಶಿಲಾಮಠ ಹಾಗು ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ತಿಪಟೂರು ಶ್ರೀ ಸಿಡ್ಗೇಹಳ್ಳಿ ಮಹಾಸಂಸ್ಥಾನಮಠದ ಗುರುಕುಲಾನಂದಾಶ್ರಮದ ಶ್ರೀ ಇಮ್ಮಡಿ ಕರಿಬಸವ ದೇಶಿಕೇಂದ್ರ ಸ್ವಾಮೀಜಿ, ಹರಪನಹಳ್ಳಿ ಮಹಾ ಸಂಸ್ಥಾನ ತೆಗ್ಗಿನಮಠದ ಶ್ರೀ ವರ ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ, ಹುಣಸಘಟ್ಟ ಶ್ರೀ ಗುರು ಹಾಲಸ್ವಾಮಿ ಮಠದ ಶ್ರೀ ಗುರು ಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶಿವಮೊಗ್ಗ ಶ್ರೀ ಬಸವ ಕೇಂದ್ರ ಹಾಗು ಚಿಕ್ಕಮಗಳೂರು ಬಸವ ಮಂದಿರದ ಡಾ. ಬಸವ ಮರುಳಸಿದ್ದ ಸ್ವಾಮೀಜಿ, ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಚನ್ನಗಿರಿ ಹಾಲಸ್ವಾಮಿ ವಿರಕ್ತಮಠದ ಡಾ. ಶ್ರೀ ಬಸವ ಜಯಚಂದ್ರ ಸ್ವಾಮೀಜಿ, ತಿಪ್ಪಾಯಿಕೊಪ್ಪ ಜಂಗಮ ಕ್ಷೇತ್ರದ ಶ್ರೀ ಮೂಕಪ್ಪ ಶಿವಯೋಗಿಗಳ ಮಠದ ಶ್ರೀ ಮಹಾಂತ ಸ್ವಾಮೀಜಿ, ತಾವರೆಕೆರೆ ಶ್ರೀ ಶಿಲಾಮಠದ ಡಾ. ಶ್ರೀ ಅಭಿನವ ಸಿದ್ದಲಿಂಗ ಸ್ವಾಮೀಜಿ ಮತ್ತು ಶಿಕಾರಿಪುರ ವಿರಕ್ತಮಠದ ಶ್ರೀ ಚನ್ನಬಸವ ಸ್ವಾಮೀಜಿ ಉಪಸ್ಥಿತರಿರುವರು.
    ಸಂಸದ ಬಿ.ವೈ ರಾಘವೇಂದ್ರ ದಾಸೋಹ ಮಂದಿರ ಉದ್ಘಾಟಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸಮಾರಂಭ ಉದ್ಘಾಟಿಸುವರು. ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಅಧ್ಯಕ್ಷತೆ ವಹಿಸಲಿದ್ದು, ಕೈಗಾರಿಕೋದ್ಯಮಿ ಬಿ.ಕೆ ನಂಜುಂಡಶೆಟ್ಟರ್, ನಿವೃತ್ತ ಐಎಎಸ್ ಅಧಿಕಾರಿ ಎಸ್. ದಯಾಶಂಕರ್, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಂ. ಶ್ರೀಕಾಂತ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. 

No comments:

Post a Comment