ಭದ್ರಾವತಿ, ಸೆ. ೨೩: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಏಕಪಕ್ಷೀಯವಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಬಾರದೆಂದು ಆಗ್ರಹಿಸಿ ಸೆ.೨೪ರಂದು ಮೀಸಲಾತಿ ಸಂರಕ್ಷಣಾ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ಚಿಂತನಾ ಸಮಾವೇಶದ ಸಭೆಯ ನಿರ್ಣಯದಂತೆ ಹೋರಾಟ ಹಮ್ಮಿಕೊಳ್ಳಲಾಗಿದೆ. ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಛೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment