ಅದ್ದೂರಿ ಆಚರಣೆ : ವೀರಶ್ಯೆವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್‌ಕುಮಾರ್
ಭದ್ರಾವತಿ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಾಲಯದಲ್ಲಿ ಮಂಗಳವಾರ ವೀರಶ್ಯೆವ ಸೇವಾ ಸಮಿತಿ ವತಿಯಿಂದ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ ಜರುಗಿತು.
ಭದ್ರಾವತಿ, ಸೆ. ೧೪: ಪ್ರತಿ ವರ್ಷ ತಾಲೂಕು ಮಟ್ಟದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ ಅದ್ದೂರಿಯಾಗಿ ಆಚರಿಸುವ ಮೂಲಕ
ವೀರಗಾಸೆ ಕಲಾವಿದರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹಳೇನಗರ ವೀರಶ್ಯೆವ ಸೇವಾ ಸಮಿತಿ ಅಧ್ಯಕ್ಷ ಆರ್. ಮಹೇಶ್‌ಕುಮಾರ್ ತಿಳಿಸಿದರು.
ಅವರು ಮಂಗಳವಾರ ಸಮಿತಿ ವತಿಯಿಂದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರಸ್ವಾಮಿ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.
ಅನೇಕ ಮಠಾಧೀಶರು ಹಾಗೂ ವೀರಶ್ಯೆವ ಸಂಘಟನೆಗಳು ಕೈಗೊಂಡಿರುವ ತಿರ್ಮಾನದಂತೆ ಸಮಿತಿ ವತಿಯಿಂದ ಪ್ರತಿ ವರ್ಷ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು. ಅಲ್ಲದೆ ತಾಲೂಕು ಮಟ್ಟದಲ್ಲಿ ವೀರಗಾಸೆ ಸ್ಪರ್ಧೆಯನ್ನು ಏರ್ಪಡಿಸಿ ಕಲಾವಿದರನ್ನು ಪ್ರೋತ್ಸಾಹಿಸಲಾಗುವುದು ಎಂದರು.
ಶ್ರೀ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಚಿನ್ನಯ್ಯ ಹಿರೇಮಠ, ಶಂಕರಯ್ಯ ಶಾಸ್ತ್ರಿ ಮತ್ತು ಸಿ.ಎಂ ಮಹೇಶ್ವರ ಮೂರ್ತಿ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿಕೊಟ್ಟರು. ಜಂಗಮ ಸಮಾಜದ ಅಧ್ಯಕ್ಷ ಅಡವೀಶಯ್ಯ, ಜೆ. ಶಿವಕುಮಾರ, ಎಂ. ವಾಗೀಶ್ ಕೋಠಿ, ಚಂದ್ರಶೇಖರ್, ಪಿ.ಹೆಚ್ ಜಗದೀಶ, ಜಿ.ಆರ್ ಸತೀಶ್, ಅನುಪಮ ಚನ್ನೇಶ್, ವಿ.ಟಿ ನಾಗರತ್ನ, ಆರ್.ಎಸ್ ಶೋಭಾ, ಆರ್.ಎಂ.ಸಿ ಪ್ರಕಾಶ್ ಮತ್ತು ರೂಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment