ಭದ್ರಾವತಿ ತಾಲೂಕಿನ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಪೊಲೀಸ್ ಹಾಗು ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸುತ್ತಿರುವುದು.
ಭದ್ರಾವತಿ, ಸೆ. ೪: ತಾಲೂಕಿನ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಶಿವಮೊಗ್ಗ ಮಂಜುನಾಥ ಬಡಾವಣೆ ನಿವಾಸಿಗಳಾದ ಕಿರಣ್(೧೯) ಮತ್ತು ಶಶಾಂಕ್(೧೯) ಮೃತಪಟ್ಟಿದ್ದಾರೆ. ಈ ಇಬ್ಬರು ಯುವಕರು ಶಿವಮೊಗ್ಗ ಎಜ್ಯುಕೇರ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದು, ೫ ವಿದ್ಯಾರ್ಥಿಗಳನ್ನೊಳಗೊಂಡ ತಂಡ ಗೊಂದಿ ಅಣೆಕಟ್ಟು ವೀಕ್ಷಿಸಲು ಬಂದಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಆಳವಿರುವ ಸ್ಥಳದಲ್ಲಿ ಕಿರಣ್ ಮತ್ತು ಶಶಾಂಕ್ ಈಜಲು ನೀರಿಗೆ ಇಳಿದಿದ್ದು, ಇಬ್ಬರು ನೀರಿನ ಸೆಳೆತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು, ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಧಾವಿಸಿ ಇಬ್ಬರು ವಿದ್ಯಾರ್ಥಿಗಳ ಮೃತ ದೇಹ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಶವ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
No comments:
Post a Comment