ಭದ್ರಾವತಿ, ಸೆ. ೧೩: ನಗರದ ಅನ್ನದಾತ, ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನಾಚರಣೆ ಸೆ.೧೫ರಂದು ಬೆಳಿಗ್ಗೆ ೭ ಗಂಟೆಗೆ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರದ ರೈಲ್ವೆ ನಿಲ್ದಾಣದ ಬಳಿ ಹಮ್ಮಿಕೊಳ್ಳಲಾಗಿದೆ.
ವಿಶ್ವದಾದ್ಯಂತ ತಮ್ಮದೇ ಆದ ಕೊಡುಗೆ ನೀಡಿರುವ ಹಾಗು ನಗರದಲ್ಲಿ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳ ಸ್ಥಾಪನೆಗೆ ಕಾರಣಕರ್ತರಾಗುವ ಮೂಲಕ ಸಾವಿರಾರು ಕುಟುಂಬಗಳಿಗೆ ಅನ್ನದಾತರಾಗಿರುವ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಈ ಬಾರಿ ಸಂಘದ ವತಿಯಿಂದ ವಿಶೇಷವಾಗಿ ಆಚರಿಸಲಾಗುತ್ತಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment