ಭದ್ರಾವತಿ, ಸೆ. 21: ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಮೊದಲ ವರ್ಷದ ಪುಣ್ಯಸ್ಮರಣೆ, ಶಕ್ತಿಧಾಮ ಹಾಗು ಪ್ರತಿಮೆ ಅನಾವರಣ ಸಮಾರಂಭ ಮಂಗಳವಾರ ತಾಲೂಕಿನ ಗೋಣಿಬೀಡಿನ ಶಾಲಾ ಆವರಣದಲ್ಲಿ ನಡೆಯಿತು.
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಶಕ್ತಿಧಾಮ ಹಾಗು ಪ್ರತಿಮೆ ಅನಾವರಣ ನೆರವೇರಿಸಿದರು. ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶಿವಮೊಗ್ಗ ಬಸವ ಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ದ ಸ್ವಾಮೀಜಿ, ಕನಕ ಗುರುಪೀಠ ಹೊಸದುರ್ಗ ಶಾಖೆಯ ಶ್ರೀ ಈಶ್ವರಾನಂದ ಸ್ವಾಮೀಜಿ, ಚಿತ್ರದುರ್ಗ ಛಲವಾದಿ ಜಗದ್ಗುರು ಪೀಠದ ಶ್ರೀ ಬಸವನಾಗಿದೇವ ಶರಣರು, ಚಿತ್ರದುರ್ಗ ಬಂಜಾರ ಪೀಠದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹರಿಹರ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಹಿರಿಯೂರು ಕೋಡಿಹಳ್ಳಿ ಬೃಹನ್ಮಠ ಮಾದಾರ ಪೀಠದ ಶ್ರೀ ಆದಿಜಾಂಭವ ಮಾರ್ಕಾಂಡಮುನಿ ಸ್ವಾಮೀಜಿ, ಅರಕೆರೆ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ, ಶ್ರೀ ಕ್ಷೇತ್ರ ಭದ್ರಗಿರಿಯ ಶ್ರೀ ಮುರುಗೇಶ್ ಸ್ವಾಮೀಜಿ, ಸಿಎಸ್‌ಐ ವೇನ್ಸ್ ಮೆಮೋರಿಯಲ್ ಚರ್ಚ್‌ನ ಶಿವಮೊಗ್ಗ ವಲಯಾಧ್ಯಕ್ಷ ರೆವರೆಂಡ್ ಜಿ. ಸ್ಟ್ಯಾನ್ಲಿ ಮತ್ತು ಶಿವಮೊಗ್ಗ ದಾರುಲ್ ಇ-ಹಸನ್ ಮದರಸ ಪ್ರಿನ್ಸಿಪಾಲ್ ಶ್ರೀ ಮೌಲಾನ ಶಾಹುಲ್ ಹಮೀದ್ ಉಪಸ್ಥಿತರಿದ್ದರು..
ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ, ಕಡೂರು ಮಾಜಿ ಶಾಸಕ ವೈಎಸ್‌ವಿ ದತ್ತ, ಜೆಡಿಎಸ್ ಮುಖಂಡ ಎಂ. ಶ್ರೀಕಾಂತ್ ಮತ್ತು ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment