ಭದ್ರಾವತಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಭಾರತರತ್ನ, ಅನ್ನದಾತ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಅದ್ದೂರಿಯಾಗಿ ಆಚರಿಸಲಾಯಿತು.
ಭದ್ರಾವತಿ, ಸೆ. ೧೬: ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಭಾರತರತ್ನ, ಅನ್ನದಾತ ಸರ್.ಎಂ ವಿಶ್ವೇಶ್ವರಾಯ ಅವರ ಜನ್ಮದಿನ ಅದ್ದೂರಿಯಾಗಿ ಆಚರಿಸಲಾಯಿತು.
ರೈಲ್ವೆ ನಿಲ್ದಾಣದ ಆವರಣದ ಉದ್ಯಾನವನದಲ್ಲಿ ಪ್ರತಿಷ್ಠಾಪಿಸಲಾಗಿರುವ ಸರ್.ಎಂ ವಿಶ್ವೇಶ್ವರಯ್ಯನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀರಂಗರಾಜಪುರೆ ಮತ್ತು ಕಿರಿಯ ಅಭಿಯಂತರ ಎಸ್.ಆರ್ ಸತೀಶ್, ರೈಲ್ವೆ ನಿಲ್ದಾಣದ ಅರುಣ್, ಶಿವಮೊಗ್ಗ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ, ತಾಲೂಕು ಅಧ್ಯಕ್ಷ ಅಶೋಕ್, ಪ್ರಧಾನ ಕಾರ್ಯದರ್ಶಿ ವೆಂಕಟಗಿರಿ, ಹಿರಿಯ ಮಾಜಿ ಸೈನಿಕರಾದ ಗೋವಿಂದಪ್ಪ, ಮುದುಗಲ ರಾಮರೆಡ್ಡಿ, ಕುಂಚ ಕಲಾವಿದರ ಸಂಘದ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment