ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮ ಪಂಚಾಯಿತಿ ವತಿಯಿಂದ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರ ಸಹಕಾರದೊಂದಿಗೆ ಬುಧವಾರ ಪೋಷಣ್ ಅಭಿಯಾನ ಆಯೋಜಿಸಲಾಗಿತ್ತು.
ಭದ್ರಾವತಿ, ಸೆ. ೨೯: ತಾಲೂಕಿನ ಬಾರಂದೂರು ಗ್ರಾಮ ಪಂಚಾಯಿತಿ ವತಿಯಿಂದ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರ ಸಹಕಾರದೊಂದಿಗೆ ಬುಧವಾರ ಪೋಷಣ್ ಅಭಿಯಾನ ಆಯೋಜಿಸಲಾಗಿತ್ತು.
ವಿಶೇಷವಾಗಿ ಆಕರ್ಷಕ ರಂಗು ರಂಗಿನ ರಂಗೋಲೆ ಮೂಲಕ ಪೋಷಣ್ ಅಭಿಯಾನದ ಮಹತ್ವ ಸಾರಲಾಯಿತು. ಜೊತೆಗೆ ಸಂಪನ್ಮೂಲ ವ್ಯಕ್ತಿಗಳು ಅಭಿಯಾನದ ಸಂಪೂರ್ಣ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲಮ್ಮ ಅಧ್ಯಕ್ಷತೆ ವಹಿಸಿದ್ದರು.
ಡಾ. ಗಿರೀಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ತಾಲೂಕು ಪಂಚಾಯಿತಿ ಸದಸ್ಯ ಪ್ರೇಮ್‌ಕುಮಾರ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಮಾ ಪರಮೇಶ್, ಕರಾವೇ ತಾಲೂಕು ಅಧ್ಯಕ್ಷ ಬಾರಂದೂರು ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment