ಗಂಗಾಧರ್
ಭದ್ರಾವತಿ, ಸೆ. ೬: ತಾಲೂಕಿನ ಹೊಸ ಸಿದ್ದಾಪುರ ಗ್ರಾಮದ ನಿವಾಸಿ, ಶಿವಮೊಗ್ಗ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗಂಗಾಧರ್(೪೫) ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗಂಗಾಧರ್ ಮನೆಯ ಮೇಲಿನ ಮಹಡಿಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಶವ ಪರೀಕ್ಷೆ ನಡೆಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಎದೆ ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಗಾಧರ ಸುಮಾರು ೨೦ ವರ್ಷಗಳ ಹಿಂದೆ ಬಿಎಂಟಿಸಿ ಚಾಲಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದರು. ನಂತರ ಧರ್ಮಸ್ಥಳ ಘಟಕದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿ ನಂತರ ಕಳೆದ ಸುಮಾರು ಒಂದೂವರೆ ವರ್ಷದಿಂದ ಶಿವಮೊಗ್ಗ ಘಟಕದಲ್ಲಿ ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ಸಂಚರಿಸುವ ಬಸ್ಸಿನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
No comments:
Post a Comment