ಭದ್ರಾವತಿ ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಹಾಗು ಐಸಿಟಿ ವಿಭಾಗಗಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಹೊಸ ಶಿಕ್ಷಣ ನೀತಿ-೨೦೨೦ ವಿಷಯ ಕುರಿತ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಮಾತನಾಡಿದರು.
ಭದ್ರಾವತಿ, ಸೆ. ೯: ಸರ್ಕಾರ ಪ್ರಸ್ತುತ ಜಾರಿಗೆ ತಂದಿರುವ ಹೊಸ ಶಿಕ್ಷಣ ನೀತಿಗೆ ವಿದ್ಯಾರ್ಥಿಗಳು ಹೊಂದಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಉತ್ತಮ ಪ್ರತಿಫಲ ಪಡೆಯಲು ಸಾಧ್ಯ ಎಂದು ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ ಧನಂಜಯ ಹೇಳಿದರು.
ಅವರು ಕಾಲೇಜಿನಲ್ಲಿ ಐಕ್ಯೂಎಸಿ ಹಾಗು ಐಸಿಟಿ ವಿಭಾಗಗಳ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಹೊಸ ಶಿಕ್ಷಣ ನೀತಿ-೨೦೨೦ ವಿಷಯ ಕುರಿತ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯಾವುದೇ ಹೊಸ ವಿಷಯಗಳಿಗೆ ಹೊಂದಿಕೊಳ್ಳುವುದು ಸ್ವಲ್ಪಮಟ್ಟಿಗೆ ಕಷ್ಟವಾದರೂ ಅದಕ್ಕೆ ಹೊಂದಿಕೊಳ್ಳುವುದರಿಂದ ನಮಗೆ ಅದರಿಂದ ಸಿಗುವ ಪ್ರತಿಫಲ ಹೆಚ್ಚು. ಹಾಗಾಗಿ ಈ ಶಿಕ್ಷಣ ನೀತಿಯನ್ನು ಅರ್ಥಮಾಡಿಕೊಂಡು ಅನುಷ್ಠಾನಗೊಳಿಸಿ ದೇಶದ ಸರ್ವಾಂಗೀಣ ಪ್ರಗತಿಗೆ ನಮ್ಮದೇ ಆದ ಕೊಡುಗೆಯನ್ನು ಸಲ್ಲಿಸಬೇಕೆಂದರು.
ಡಾ. ಕಸ್ತೂರಿ ರಂಗನ್‌ರವರ ವರದಿ ಆಧರಿಸಿ ಎಲ್ಲಾ ಹಂತಗಳಲ್ಲೂ ಚರ್ಚಿಸಿ ಕೂಲಂಕುಶವಾಗಿ ಅಧ್ಯಯನ ನಡೆಸಿ ಈ ನೀತಿಯನ್ನು ಜಾರಿಗೆ ತರಲಾಯಿತು. ಶಾಲಾ ಶಿಕ್ಷಣ, ಉನ್ನತ ಶಿಕ್ಷಣದಲ್ಲಿ ಪಠ್ಯಕ್ರಮ ಸುಧಾರಣೆ, ಆಡಳಿತ ಮತ್ತು ನಿಯಂತ್ರಣ, ವಿದ್ಯಾರ್ಥಿಯ ಸಾಮರ್ಥ್ಯವನ್ನು ಗುರುತಿಸುವುದು ಮತ್ತು ಪೋಷಿಸುವುದು. ನಮ್ಯತೆ ಹಾಗು ಸರ್ವಾಂಗೀಣ ಪ್ರಗತಿ ಹೊಸ ಶಿಕ್ಷಣ ನೀತಿಯ ಗುರಿಗಳಾಗಿವೆ ಎಂದರು.
ಶಿವಮೊಗ್ಗ ಪ್ರಾದೇಶಿಕ ಜಂಟಿ ನಿರ್ದೇಶಕ ಕಚೇರಿಯ ಅಧಿಕಾರಿ ವಿದ್ಯಾಮರಿಯಾ ಜೋಸೆಫ್, ಪ್ರೊ. ಉಮೇಶ್‌ಕುಮಾರ್, ಡಾ. ಬಿ.ಜಿ ಅಮೃತೇಶ್ವರ್, ಪ್ರೊ. ಮಲ್ಲಪ್ಪ, ಡಾ. ಬಿ. ಬಸವರಾಜಪ್ಪ, ಡಾ. ರಾಜಶೇಖರ್, ಪ್ರೊ. ಎನ್.ಯು.ಆರ್ ಹೆಗ್ಗಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment