ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಹರಿದು ಬಿಟ್ಟಿರುವ ಹಿನ್ನಲೆಯಲ್ಲಿ ಭದ್ರಾವತಿ ನಗರದ ಹೃದಯ ಭಾಗದಲ್ಲಿರುವ ಶ್ರೀ ಸಂಗಮೇಶ್ವರ ದೇವಸ್ಥಾನ ಮುಳುಗಡೆಗೊಂಡಿರುವುದು.
ಭದ್ರಾವತಿ, ಸೆ. ೧೬: ಕಳೆದ ಕೆಲವು ದಿನಗಳಿಂದ ಭದ್ರಾ ಜಲಾಶಯದ ಸುತ್ತಮುತ್ತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ೩-೪ ದಿನಗಳಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ನದಿಗೆ ಹರಿದು ಬಿಡಲಾಗುತ್ತಿದೆ.
ಗುರುವಾರ ಜಲಾಶಯದ ಪ್ರಮಾಣ ೧೮೫ ಅಡಿಗಳಿದ್ದು, ಕಳೆದ ಬಾರಿ ಸಹ ಇಷ್ಟೆ ಪ್ರಮಾಣದ ನೀರು ಸಂಗ್ರಹವಾಗಿತ್ತು. ಈ ಬಾರಿ ಜಲಾಶಯ ಬಹುಬೇಗನೆ ಆಗಸ್ಟ್ ತಿಂಗಳ ಆರಂಭದಲ್ಲಿಯೇ ಪೂರ್ಣವಾಗಿ ಭರ್ತಿಯಾಗಿದ್ದು, ಕ್ಷೇತ್ರದಲ್ಲಿ ಈ ವರ್ಷ ಸಹ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ದೂರವಾಗಿವೆ. ಇದರಿಂದಾಗಿ ರೈತರು ನೆಮ್ಮದಿ ಕಾಣುವಂತಾಗಿದ್ದು, ಆದರೂ ಸಹ ಈ ನಡುವೆ ಅಕಾಲಿಕ ಅತಿವೃಷ್ಟಿಗಳಿಂದಾಗಿ ರೈತರು ಸಂಕಷ್ಟಗಳಿಗೆ ಒಳಗಾಗುತ್ತಿರುವುದು ತಪ್ಪುತ್ತಿಲ್ಲ.
ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರು ನದಿಗೆ ಹರಿದು ಬಿಟ್ಟಿರುವ ಹಿನ್ನಲೆಯಲ್ಲಿ ನಗರದ ಹೃದಯ ಭಾಗದಲ್ಲಿರುವ ಹೊಸಸೇತುವೆ ಶೇ.೭೫ರಷ್ಟು ಮುಳುಗಡೆಗೊಂಡಿದ್ದು, ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಸ್ಥಾನ ಮುಳುಗಡೆಗೊಂಡಿದೆ. ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಲ್ಲಿ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಲಿದೆ.
No comments:
Post a Comment