ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ಮಾತನಾಡಿದರು.
ಭದ್ರಾವತಿ, ಸೆ. ೬: ಕೋವಿಡ್-೧೯ರ ನಡುವೆಯೂ ಈ ಬಾರಿ ಗಣೇಶ ಚತುರ್ಥಿಯನ್ನು ಸಾರ್ವಜನಿಕವಾಗಿ ಆಚರಿಸಲು ಹಲವು ಮಾರ್ಗಸೂಚಿಗಳೊಂದಿಗೆ ಸರ್ಕಾರ ಅನುಮತಿ ನೀಡಿದ್ದು, ಸಾರ್ವಜನಿಕರು ಹೆಚ್ಚಿನ ಮುಂಜಾಗ್ರತೆವಹಿಸಿ ಹಬ್ಬವನ್ನು ಸರಳವಾಗಿ, ಶಾಂತಿಯುತವಾಗಿ ಆಚರಿಸಬೇಕೆಂದು ತಹಸೀಲ್ದಾರ್ ಆರ್. ಪ್ರದೀಪ್ ಕರೆ ನೀಡಿದರು.
ಅವರು ಸೋಮವಾರ ನಗರದ ನ್ಯೂಟೌನ್ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರತಿಯೊಬ್ಬರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡಬಾರದು. ಹಬ್ಬದ ಆಚರಣೆಗೆ ತಾಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗು ಸ್ಥಳೀಯ ನಗರಸಭೆ ಆಡಳಿತಗಳು ಎಲ್ಲಾ ರೀತಿಯ ಸಹಕಾರ ನೀಡಲಿವೆ. ಇದೆ ರೀತಿ ಸಾರ್ವಜನಿಕರು ಸಹ ಪೂರಕವಾಗಿ ಸ್ಪಂದಿಸುವಂತೆ ಮನವಿ ಮಾಡಿದರು.
ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಪರಿಸರ ಅಭಿಯಂತರ ಪ್ರಭಾಕರ್, ಕಂದಾಯಾಧಿಕಾರಿ ರಾಜ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ಪೊಲೀಸ್ ಉಪಾಧೀಕ್ಷಕ ಸಾಹಿಲ್ ಬಾಗ್ಲಾ, ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣಾಧಿಕಾರಿ ಕೆ.ಎಚ್ ಜಯಪ್ಪ, ಅಗ್ನಿ ಶಾಮಕ ಠಾಣಾಧಿಕಾರಿ ವಸಂತಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment