ಜನಾರ್ಧನ
ಭದ್ರಾವತಿ, ಸೆ. ೨೩: ನಗರಸಭೆ ವ್ಯವಸ್ಥಾಪಕಿ ಸುನಿತಾಕುಮಾರಿ ಅವರ ಪತಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿಯ ಕ್ಷೇಮಾಭಿವೃದ್ಧಿ ನೌಕರ ಜನಾರ್ಧನ(೫೪) ಬುಧವಾರ ರಾತ್ರಿ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ ಹಾಗು ಓರ್ವ ಪುತ್ರಿಯನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ಮೃತರ ನಿಧನಕ್ಕೆ ನಗರಸಭೆ ಪೌರಾಯುಕ್ತ ಕೆ. ಪರಮೇಶ್ ಹಾಗು ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು, ನಗರಸಭಾ ಸದಸ್ಯರು, ತಾಲೂಕು ಬಲಿಜ ಸಂಘ, ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.
ಮೃತರ Athama ಕ್ಕೆ ಭಗವಂತ ಚಿರ ಶಾಂತಿ ನೀಡಲಿ ಎಂದು ಪ್ರಾಥಿಸುತ್ತೇನೆ.
ReplyDeleteಕೆ ಎಂ ಸತೀಶ್
ಅಡ್ವೋಕೇಟ್.