ಭದ್ರಾವತಿ, ಸೆ. ೫: ನಗರಸಭೆ ವಾರ್ಡ್ ನಂ.೨೯ರ ಚುನಾವಣೆ ಮತ ಎಣಿಕೆ ಸೋಮವಾರ ಬೆಳಿಗ್ಗೆ ೮ ಗಂಟೆಗೆ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ನಗರಸಭೆ ೩೫ ವಾರ್ಡ್‌ಗಳಿಗೆ ಚುನಾವಣಾ ಆಯೋಗ ಚುನಾವಣೆ ಘೋಷಿಸಿದ್ದ ಸಂದರ್ಭದಲ್ಲಿ ವಾರ್ಡ್ ನಂ.೨೯ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರದ ವೇಳೆ ಹೃದಯಾಘಾತದಿಂದ ನಿಧನ ಹೊಂದಿದ್ದರು. ಈ ಹಿನ್ನಲೆಯಲ್ಲಿ ಉಳಿದ ೩೪ ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. ಫಲಿತಾಂಶ ಸಹ ಪ್ರಕಟಗೊಂಡಿದೆ. ಉಳಿದಂತೆ ವಾರ್ಡ್ ನಂ.೨೯ಕ್ಕೆ ಸೆ.೩ರಂದು ಮತದಾನ ನಡೆದಿದೆ. ಸೆ.೬ರ ಸೋಮವಾರ ಮತ ಎಣಿಕೆ ನಡೆಯಲಿದೆ.
ಈಗಾಗಲೇ ಮತ ಎಣಿಕೆಗೆ ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದಿಂದ ಬಿ.ಜಿ ಲೋಯಿತಾ ನಂಜಪ್ಪ, ಜೆಡಿಎಸ್ ಪಕ್ಷದಿಂದ ಆರ್. ನಾಗರತ್ನ ಮತ್ತು ಬಿಜೆಪಿ ಪಕ್ಷದಿಂದ ರಮಾ ವೆಂಕಟೇಶ್ ಸ್ಪರ್ಧಿಸಿದ್ದು, ೩ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬೆಳಿಗ್ಗೆ ೧೦ ಗಂಟೆಯೊಳಗೆ ಫಲಿತಾಂಶ ಹೊರಬೀಳಲಿದೆ. ಯಾರಿಗೆ ವಿಜಯ ಮಾಲೆ ಎಂಬುದನ್ನು ಕಾದು ನೋಡಬೇಕಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ಪ್ರಬಲ ಸ್ಪರ್ಧೆ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
No comments:
Post a Comment