ಬೌದ್ಧ ವಿಹಾರ/ಮಂದಿರ ನಿರ್ಮಾಣಕ್ಕೆ ಜಮೀನು ದಾನ ಮಾಡಿರುವ
ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಶ್ರೀನಿವಾಸ್
ಭದ್ರಾವತಿ, ಅ. ೧೦: ನಗರದಲ್ಲಿ ಬೌದ್ಧ ವಿಹಾರ/ಮಂದಿರ ನಿರ್ಮಾಣಕ್ಕೆ ಸ್ವಂತ ಜಮೀನು ದಾನ ನೀಡುವ ಮೂಲಕ ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಧಿಕಾರಿ ಶ್ರೀನಿವಾಸ್ ಉದಾರತೆ ಮೆರೆದಿದ್ದಾರೆ.
ನಗರದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡಿರುವ ಬಹಳಷ್ಟು ಮಂದಿ ಇತ್ತೀಚಿನ ವರ್ಷಗಳಲ್ಲಿ ಬೌದ್ಧ ಧರ್ಮದ ಕಡೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಗವಾನ್ ಬುದ್ಧ ಹಾಗು ಅಂಬೇಡ್ಕರ್ ಅವರ ಅನುಯಾಯಿಗಳಿಗೆ ಪೂರಕ ವಾತಾವರಣ ಕಲ್ಪಿಸಿಕೊಡುವಂತೆ ಇದೀಗ ಬೌದ್ಧ ವಿಹಾರ/ಮಂದಿರ ನಿರ್ಮಾಣಗೊಳ್ಳುತ್ತಿದೆ.
ಮೂಲತಃ ಹೊಸನಂಜಾಪುರ ಗ್ರಾಮದವರಾದ ದಾವಣಗೆರೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರುವ ಶ್ರೀನಿವಾಸ್ ಅವರು ತಮ್ಮ ಸ್ವಂತ ಜಮೀನಿನಲ್ಲಿ ಬೌದ್ಧ ವಿಹಾರ ನಿರ್ಮಾಣಕ್ಕೆ ಸುಮಾರು ೨ ಎಕರೆ ಜಾಗವನ್ನು ಸಂಬುದ್ಧ ಧಮ್ಮಾಂಕುರ ಟ್ರಸ್ಟ್‌ಕ್ಕೆ ದಾನವಾಗಿ ನೀಡಿದ್ದಾರೆ. ಬಾಕಿ ಉಳಿದಿರುವುದು ಸುಂದರ ಬೌದ್ಧ ವಿಹಾರ/ಮಂದಿರ ನಿರ್ಮಾಣದ ಕಾರ್ಯ ಮಾತ್ರ. ಅ.೧೪ರಂದು ಬೌದ್ಧ ವಿಹಾರ/ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ನಡೆಯುತ್ತಿದ್ದು, ಶೀಘ್ರವಾಗಿ ಮುಕ್ತಾಯಗೊಳ್ಳುವ ಮೂಲಕ ಲೋಕಾರ್ಪಣೆಗೊಳ್ಳುವಂತಾಗಲಿ ಎಂಬುದು ಬೌದ್ಧ ಅನುಯಾಯಿಗಳ ಆಶಯವಾಗಿದೆ.
ಇದೆ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳ ಪ್ರಮುಖರಾದ ಸುರೇಶ್ ಹಾಗು ಶಿಕ್ಷಕ ಎ. ತಿಪ್ಪೇಸ್ವಾಮಿ ಅವರು ಬೌದ್ಧ ಭಿಕ್ಕುಗಳ ಸಮ್ಮುಖದಲ್ಲಿ ಬೌದ್ಧ ಧರ್ಮ ದೀಕ್ಷೆ ಪಡೆಯಲಿದ್ದಾರೆ.
No comments:
Post a Comment