ಭದ್ರಾವತಿ ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ನವಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭದ್ರಾವತಿ, ಅ. ೨: ದುಶ್ಚಟಗಳಿಗೆ ಬಲಿಯಾದವರಿಗೆ ಹೊಸ ಜೀವನ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರೂಪಿಸಿಕೊಂಡಿರುವ ಕಾರ್ಯಕ್ಕೆ ಯಾರಿಂದಲೂ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು.
ಅವರು ಶನಿವಾರ ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ನವಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ಈ ನಡುವೆ ದುಶ್ಚಟಗಳಿಗೆ ಬಲಿಯಾದವರನ್ನು ಸಹ ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿನಲ್ಲಿ ಬೆರೆಯುವಂತೆ ಮಾಡುತ್ತಿರುವುದು ಬಹುದೊಡ್ಡ ಕಾರ್ಯವಾಗಿದೆ. ಸಮಾಜದಲ್ಲಿ ಯಾರು ಸಹ ದುಶ್ಚಟಗಳಿಗೆ ಬಲಿಯಾಗಬಾರದು. ಪ್ರತಿಯೊಬ್ಬರು ಈ ನಿಟ್ಟಿನಲ್ಲಿ ಜಾಗೃತಿ ಹೊಂದಬೇಕೆಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಆನಂದಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಹಕಾರಿ ಧುರೀಣ ಕೆ.ಎನ್ ಭೈರಪ್ಪ ಗೌಡ, ವೇದಿಕೆ ಸದಸ್ಯರಾದ ಆರ್. ಕರುಣಾಮೂರ್ತಿ, ಪಾಲಾಕ್ಷಪ್ಪ, ಯೋಜನೆಯ ಜಿಲ್ಲಾ ನಿರ್ದೇಶಕಿ ಬಿ. ಗೀತಾ, ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್, ನಗರಸಭಾ ಸದಸ್ಯರಾದ ಮಣಿ ಎಎನ್‌ಎಸ್, ಸುದೀಪ್‌ಕುಮಾರ್, ಅಕ್ಕಮಹಾದೇವಿ ಬಳಗದ ಸವರ್ಣಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment