ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದ ದಲಿತ ಬಾಲಕಿಯ ಮೇಲೆ ನಡೆದ ದೌರ್ಜನ್ಯ ಮತ್ತು ಅತ್ಯಾಚಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭದ್ರಾವತಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಅ. ೧೩: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದ ದಲಿತ ಬಾಲಕಿಯ ಮೇಲೆ ನಡೆದ ದೌರ್ಜನ್ಯ ಮತ್ತು ಅತ್ಯಾಚಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು ಆಗ್ರಹಿಸಿದರು.
ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮುಖಂಡರು, ದಲಿತ ಬಾಲಕಿಯರ ಮೇಲಿನ ದೌರ್ಜನ್ಯ ಹಾಗು ಅತ್ಯಾಚಾರ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ದಲಿತ ಕುಟುಂಬದ ಹೆಣ್ಣು ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ದೌರ್ಜನ್ಯ ಹಾಗು ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಸಂಘಟನಾ ಸಂಚಾಲಕ ಶಿವಬಸಪ್ಪನವರು, ತಾಲೂಕು ಸಂಚಾಲಕ ಆರ್. ರವಿನಾಯ್ಕ ಪ್ರತಿಭಟನೆ ನೇತೃತ್ವ ವಹಿಸಿದ್ದರು. ನಗರ ಸಂಚಾಲಕ ಆರ್. ತಮ್ಮಯ್ಯ, ಶಿಕ್ಷಕ ಮಹಾದೇವಪ್ಪ ಮತ್ತು ಸಂಘಟನಾ ಸಂಚಾಲಕ ಶಿವನಾಯ್ಕ, ನಾಗೇಶ್, ಸೋನಿ ಮೆಲೋಡಿ ಮಾಲೀಕ ಅರ್ ಹರೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment