ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ದಲಿತ ನೌಕರರ ಒಕ್ಕೂಟ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ರಾಜ್ಯ ವೈಚಾರಿಕ ಸಂಶೋದನಾ ಪರಿಷತ್ತು ಹಾಗು ತಾಲ್ಲೂಕು ಬಡ್ತಿ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ಭದ್ರಾವತಿ ನೂತನ ನಗರಸಭೆ ಉಪಾಧ್ಯಕ್ಷೆ ಚನ್ನಪ್ಪ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಅ. ೨೧: ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ದಲಿತ ನೌಕರರ ಒಕ್ಕೂಟ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕರ್ನಾಟಕ ರಾಜ್ಯ ವೈಚಾರಿಕ ಸಂಶೋದನಾ ಪರಿಷತ್ತು ಹಾಗು ತಾಲ್ಲೂಕು ಬಡ್ತಿ ಮುಖ್ಯ ಶಿಕ್ಷಕರ ಸಂಘದ ವತಿಯಿಂದ ನೂತನ ನಗರಸಭೆ ಉಪಾಧ್ಯಕ್ಷೆ ಚನ್ನಪ್ಪ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ದಲಿತ ನೌಕರರ ಒಕ್ಕೂಟದ ಅಧ್ಯಕ್ಷೆ ಎಸ್. ಉಮಾ ಅಧ್ಯಕ್ಷತೆ ವಹಿಸಿದ್ದರು. ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಜಿಲ್ಲಾ ಸಂಚಾಲಕ ಚಿನ್ನಯ್ಯ, ದಲಿತ ನೌಕರರ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಸಿ. ಜಯಪ್ಪ, ನಗರಸಭೆ ಪೌರಾಯುಕ್ತ ಕೆ. ಪರಮೇಶ್, ಪರಿಸರ ಅಭಿಯಂತರ ಪ್ರಭಾಕರ್, ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ತಾಲ್ಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಹಳೆನಗರದ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಇಂದಿರಾ, ಎ. ತಿಪ್ಪೇಸ್ವಾಮಿ, ಪ್ರಸನ್ನ, ನರಸಿಂಹ, ಮಾಯಮ್ಮ, ಶಿವಲಿಂಗಮ್ಮ, ರಾಜಾನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಮಾತನಾಡಿ, ನೂತನ ಉಪಾಧ್ಯಕ್ಷ ಚನ್ನಪ್ಪನವರು ನಡೆದುಕೊಂಡು ಬಂದ ಹೋರಾಟದ ದಾರಿ, ಜನರ ಬಗೆಗಿನ ಅವರಲ್ಲಿನ ಕಾಳಜಿಯನ್ನು ವಿವರಿಸಿ ಪ್ರಶಂಸೆ ವ್ಯಕ್ತಪಡಿಸಿದರು. ನರಸಿಂಹಮೂರ್ತಿ ಸ್ವಾಗತಿಸಿದರು. ಲೋಕೇಶ್ ವಂದಿಸಿದರು. ಈಶ್ವರಪ್ಪ ನಿರೂಪಿಸಿದರು.
No comments:
Post a Comment